
CHITRADURGA NEWS | 26 DECEMBER 2025
ಚಿತ್ರದುರ್ಗ: ಭರಮಸಾಗರದಲ್ಲಿ ಸದ್ದಿಲ್ಲದೆ ಶೈಕ್ಷಣಿಕ ಕ್ರಾಂತಿ ಮಾಡುತ್ತಿರುವ ಡಿವಿಎಸ್ ರೆಸಿಡೆನ್ಶಿಯಲ್ ಶಾಲೆಯಲ್ಲಿ 21ನೇ ವರ್ಷದ ಶಾಲಾ ವಾರ್ಷಿಕೋತ್ಸವದ ವೇಳೆ ಸಾಂಸ್ಕೃತಿಕ ವೈಭವ ಅದ್ದೂರಿಯಾಗಿ ಜರುಗಿತು.
ಗುರುವಾರ ಸಂಜೆ ಭರಮಸಾಗರದ ಶಾಲಾ ಆವರಣದಲ್ಲಿ ಅದ್ದೂರಿ ಸೆಟ್‌ನಲ್ಲಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹೊಳಲ್ಕೆರೆ ಶಾಸಕರಾದ ಡಾ.ಎಂ.ಚಂದ್ರಪ್ಪ ಅವರು ಉದ್ಘಾಟಿಸಿದರು.

ಇದನ್ನೂ ಓದಿ: ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ | ತಾಯಿ ಮಗು ಸೇರಿ 6 ಮಂದಿ ದಹನ
ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ದೊಡ್ಡ ಮಟ್ಟದ ಸಂಸ್ಥೆ ಕಟ್ಟಿ, ಈ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಡಿವಿಎಸ್ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಮಾತನಾಡಿ, ಡಿವಿಎಸ್ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ನಾಗರೀಕರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು. ಸಂಸ್ಕಾರ ಮತ್ತು ದೇಶಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಶುಶ್ರೂಷಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ | ಚಿತ್ರದುರ್ಗ ಮೆಡಿಕಲ್ ಕಾಲೇಜಿಗೆ ಗುತ್ತಿಗೆ ಆಧಾರದಲ್ಲಿ ನೇಮಕ
ನಮ್ಮ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ 60 ವಿದ್ಯಾರ್ಥಿಗಳು ವೈದ್ಯಕೀಯ ಪದವಿ ಪಡೆದು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಒಬ್ಬ ವಿದ್ಯಾರ್ಥಿ ಐ.ಎಫ್.ಎಸ್ ತೇರ್ಗಡೆ ಆಗಿದ್ದಾರೆ 04 ವಿದ್ಯಾರ್ಥಿಗಳು ವಿಜ್ಞಾನಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿ.ವಿ.ಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 100 ವಿದ್ಯಾರ್ಥಿಗಳು ಸಿ.ಬಿ.ಎಸ್.ಇ ಪಠ್ಯಕ್ರಮದಲ್ಲಿ ಉಚಿತ ಪ್ರವೇಶ ಪಡೆದಿದ್ದಾರೆ.
| ಪ್ರದೀಪ್ ಕುಮಾರ್, ಡಿವಿಎಸ್ ಸಂಸ್ಥೆ ಖಜಾಂಚಿ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 25 | ಮೆಕ್ಕೆಜೋಳ ರೇಟ್ ಎಷ್ಟಿದೆ?
ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಡಿವಿಎಸ್ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ 30 ವೈದ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿನಯ್ ಕುಲಕರ್ಣಿ, ಮೃತ್ಯುಂಜಯ.ಎಸ್ ಹಿರೇಮಠ್, ಮಂಜುನಾಥ್ ಕೋಗುಂಡೆ, ಡಿ.ಎಸ್.ಪ್ರವೀಣ್‌ಕುಮಾರ್, ಜೀತೇಂದ್ರ ಎನ್ ಹುಲಿಕುಂಟೆ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಡಿ.ವಿ.ಶರಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಸಿಬ್ಬಂದಿ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
