CHITRADURGA NEWS | 10 MARCH 2025
ಚಿತ್ರದುರ್ಗ: ಹೆದ್ದಾರಿ ದಾಟುತ್ತಿದ್ದ ಚಿರತೆಗೆ ವಾಹನವೊಂದು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಚಿಕ್ಕಗೊಂಡನಹಳ್ಳಿ ಸಮೀಪ ನಡೆದಿದೆ.

ಚಿತ್ರದುರ್ಗ ತಾಲೂಕು ಚಿಕ್ಕಗೊಂಡನಹಳ್ಳಿ ಸಮೀಪದಲ್ಲಿ ಹೆದ್ದಾರಿ ದಾಟಲು ಮುಂದಾಗಿದ್ದ ಚಿರತೆಗೆ ಯಾವುದೋ ವಾಹನ ಡಿಕ್ಕಿಯಾಗಿ ಹೋಗಿದೆ.
ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಅಪಘಾತದ ರಭಸಕ್ಕೆ ಚಿರತೆ ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಭೇಟಿ ನೀಡಿ ಚಿರತೆ ಕಳೆಬರವನ್ನು ತೆಗೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ: ಭೀಕರ ಅಪಘಾತ | ಐದು ಜನ ಸ್ಥಳದಲ್ಲೇ ಸಾವು | ತಮಟಕಲ್ಲು ಬಳಿ ಘಟನೆ
ತುರುವನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
