ಮುಖ್ಯ ಸುದ್ದಿ
ಸಚಿವ ಎ.ನಾರಾಯಣಸ್ವಾಮಿ ನೇತೃತ್ವದಲ್ಲಿ ನಾಳೆ ಹೆದ್ದಾರಿ-ರೈಲ್ವೇ ಪ್ರಗತಿ ಕುರಿತ ಸಭೆ

ಚಿತ್ರದುರ್ಗ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಸಂಸದರಾಗಿರುವ ಎ.ನಾರಾಯಣಸ್ವಾಮಿ ಜನವರಿ 8 ಸೋಮವಾರ ಚಿತ್ರದುರ್ಗದಲ್ಲಿ ವಿವಿಧ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ.
ಇಡೀ ದಿನ ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿರುವ ಸಚಿವರು, ಬೆಳಗ್ಗೆ 10 ಗಂಟೆಗೆ ನಾಯಕನಹಟ್ಟಿ ಸಮೀಪದ ಗೌಡಗೆರೆ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: ಭ್ರಷ್ಟ ರಾಜಕಾರಣದ ಬಗ್ಗೆ ವೈರಾಗ್ಯ | ಸಚಿವ ಎ.ನಾರಾಯಣಸ್ವಾಮಿ ಅಚ್ಚರಿಯ ಹೇಳಿಕೆ

ಬೆಳಗ್ಗೆ 11.15ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ಕುರಿತ ದಿಶಾ ಸಭೆಯಲ್ಲಿ ಭಾಗವಹಿಸುವರು.
ಆನಂತರ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ಕೈಗೊಳ್ಳುತ್ತಿರುವ ರಸ್ತೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ರೈತರಿಗೆ ಶುಭಸುದ್ದಿ | 2 ತಿಂಗಳಲ್ಲಿ ಕೃಷಿ ಪಂಪ್‍ಸೆಟ್‍ಗಳ ಅಕ್ರಮ-ಸಕ್ರಮ
ಮಧ್ಯಾಹ್ನ 3.30ಕ್ಕೆ ಚಿತ್ರದುರ್ಗ ರೈಲು ನಿಲ್ದಾಣಕ್ಕೆ ಭೇಟಿ ನೀಡಲಿದ್ದು, ರೈಲ್ವೇ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಸಹಾಯಕರು ತಿಳಿಸಿದ್ದಾರೆ.
