
CHITRADURGA NEWS | 18 DECEMBER 2025
ಚಿತ್ರದುರ್ಗ: ನಗರದ ಮಧ್ಯ ಭಾಗದಲ್ಲಿರುವ ನ್ಯಾಯಾಲಯದ ಆವರಣದಲ್ಲಿಯೇ ನ್ಯಾಯಾಲಯಗಳ ಸಂಕೀರ್ಣವನ್ನು ಶೀಘ್ರದಲ್ಲಿಯೇ ನಿರ್ಮಾಣ ಮಾಡುವಂತೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಎಸ್.ವಿಜಯ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ | ಪೊಲೀಸರಿಂದ ತಡೆ, ವಾಗ್ವಾದ, ಆಕ್ರೋಶ

ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ಕಲಾ ಕಾಲೇಜು ಹಿಂಭಾಗ ಯಂಗಮ್ಮನಕಟ್ಟೆಯ ಹತ್ತಿರವಿರುವ ಗುಡ್ಡಗಾಡು ಪ್ರದೇಶದಲ್ಲಿ ನ್ಯಾಯಾಲಯಗಳ ಸಂಕೀರ್ಣ ಮಾಡುವುದರಿಂದ ಬಡ ಕಕ್ಷಿದಾರರಿಗೆ ತೊಂದರೆಯಾಗಲಿದೆ. ಪೊಲೀಸ್ ಪೆರೇಡ್ ಮೈದಾನವನ್ನಾದರೂ ಬಳಸಿಕೊಳ್ಳಿ ಎಂದು ಮನವಿ ಮಾಡಿದರು.
ಹತ್ತು ನ್ಯಾಯಾಲಯಗಳಿವೆ. ಕೊಠಡಿಗಳು ಕಿಷ್ಕಿಂದೆಯಾಗಿರುವುದರಿಂದ ವಕೀಲರು ಕೂರಲು ಜಾಗವಿಲ್ಲದಂತಾಗಿದೆ. ಆಧುನಿಕ ನ್ಯಾಯಾಂಗ ಸಂಕೀರ್ಣವಾಗಬೇಕು. ಇದರಿಂದ ಕಕ್ಷಿದಾರರು ಹಾಗೂ ವಕೀಲರುಗಳಿಗೆ ಅನುಕೂಲವಾಗಲಿದೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಏಕಾಂಗಿಯಾಗಿಯಾದರೂ ಹೋರಾಟ ಮಾಡುತ್ತೇನೆಂದು ಕೆ.ಎಸ್.ವಿಜಯ ಎಚ್ಚರಿಸಿದರು.
ಇದನ್ನೂ ಓದಿ: ಸರ್ಕಾರದ ವಿಧೇಯಕಕ್ಕೆ ಭೋವಿ ಶ್ರೀ ವಿರೋಧ | ಕರ್ನಾಟಕ ಅನುಸೂಚಿತ ಜಾತಿಗಳ ವಿಧೇಯಕ 2025
ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಚುನಾವಣೆಯಲ್ಲಿ 25 ಚುನಾಯಿತರು ಹಾಗೂ ಒಬ್ಬ ನಾಮ ನಿರ್ದೇಶಿತರು ನೇಮಕವಾಗುವುದರಿಂದ ಜಿಲ್ಲಾವಾರು ಅಥವಾ ವಕೀಲರ ಸಂಖ್ಯೆಯನ್ನು ಆಧರಿಸಿ ಎರಡು ಜಿಲ್ಲೆಗೊಂದರಂತೆ ಕ್ಷೇತ್ರಗಳನ್ನಾಗಿ ವಿಂಗಡಿಸಿ ಪ್ರತಿನಿಧಿಸಲು ತಿದ್ದುಪಡಿ ತರುವಂತೆ ರಾಜ್ಯ ವಕೀಲರ ಪರಿಷತ್‍ನ ಗಮನ ಸೆಳೆದರು.
ಪತ್ರಿಕಾಗೋಷ್ಠಿಯಲ್ಲಿ ವಕೀಲರುಗಳಾದ ಮಾಲತೇಶ್ ಅರಸ್, ಸಚಿನ್‍ಬಾಬು, ಮಲ್ಲಿಕಾರ್ಜುನ, ವಂದನ ಇವರುಗಳು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
