By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೈತರ ತರಬೇತಿ ಕಾರ್ಯಕ್ರಮ
    ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
    4 hours ago
    ಟಿ. ರಘುಮೂರ್ತಿ
    ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
    4 hours ago
    ಸುದ್ದಿಗೋಷ್ಠಿಯಲ್ಲಿ ಜೆ.ಯಾದವರೆಡ್ಡಿ ಮಾತನಾಡಿದರು
    ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಭದ್ರಾ ಮೇಲ್ದಂಡೆ ಯೋಜನೆ ತಡವಾಗಿದೆ | ಯಾದವರೆಡ್ಡಿ
    15 hours ago
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ
    ಛಲವಾದಿ ಗುರುಪೀಠದ ಬಸವನಾಗಿದೇವ ಸ್ವಾಮೀಜಿಗೆ ಇನ್ನೋವ ಕಾರು ಗಿಫ್ಟ್ ನೀಡಿದ ಭಕ್ತ 
    15 hours ago
    ಟಿ. ರಘುಮೂರ್ತಿ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಖಂಡನೀಯ | ಶಾಸಕ ಟಿ.ರಘುಮೂರ್ತಿ 
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 day ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜುಲೈ 23 | ಕೈಗೊಂಡ ಕಾರ್ಯಗಳು ಪೂರ್ಣ, ವೃತ್ತಿ ಹಾಗೂ ಉದ್ಯೋಗದಲ್ಲಿ ಅನುಕೂಲಕರ ಪರಿಸ್ಥಿತಿ
    6 hours ago
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 day ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    2 days ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 22 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    21 hours ago
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    3 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    5 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    5 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    1 month ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Damaged electronic item
    ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
    3 hours ago
    Apply this tomato scrub to remove stubborn tanning
    ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
    4 hours ago
    Retinol
    ರೆಟಿನಾಲ್ ಅನ್ನು ಮುಖಕ್ಕೆ ಹಚ್ಚಿಕೊಳ್ಳುವವರು ಈ ನಿಯಮಗಳನ್ನು ಪಾಲಿಸಿರಿ
    1 day ago
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    1 day ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    2 days ago
Reading: 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ

News Desk Chitradurga News
Last updated: 6 April 2026 19:12
News Desk Chitradurga News
4 months ago
Share
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ
SHARE

CHITRADURGA NEWS | 06 APRIL 2026

ಚಿತ್ರದುರ್ಗ: ಜಿಲ್ಲಾಸ್ಪತ್ರೆ ಆವರಣದಲ್ಲಿ ರೂ.114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದರೊಂದಿಗೆ ಎಚ್‍ಡಿಎಫ್‍ಸಿ ಬ್ಯಾಂಕ್ ಸಿಎಸ್‍ಆರ್ ನಿಧಿಯಡಿ ಬರೋಬ್ಬರಿ ರೂ. 1.80 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿದ್ದು, ಸಾರ್ವಜನಿಕರಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಜಿಲ್ಲಾಸ್ಪತ್ರೆ ಸನ್ನದ್ಧವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ಹೇಳಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…

ನಗರದ ಜಿಲ್ಲಾಸ್ಪತ್ರೆಯ ಬಿ.ಸಿ. ರಾಯ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಸ್ಪತ್ರೆಯಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರಿಗೆ ನೀಡಿರುವ ಸೇವೆಗಳ ಕುರಿತು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.

ಆಸ್ಪತ್ರೆಯ ಮೂಲಸೌಕರ್ಯ ವೃದ್ಧಿಗೆ ವಿಶೇಷ ಒತ್ತು ನೀಡುತ್ತಿದ್ದು, ಜಿಲ್ಲಾಸ್ಪತ್ರೆಯ ಹಳೆಯ ತುರ್ತು ಚಿಕಿತ್ಸಾ ವಿಭಾಗ ತೆರವುಗೊಳಿಸಿ ಸುಮಾರು ರೂ. 114 ಕೋಟಿ ವೆಚ್ಚದಲ್ಲಿ 180 ಹಾಸಿಗೆಗಳ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 

ಇದರೊಂದಿಗೆ ರೂ. 5 ಕೋಟಿ ವೆಚ್ಚದ ‘ಕ್ರಿಟಿಕಲ್ ಕೇರ್ ಬ್ಲಾಕ್’ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಮುಂದಿನ ಮೂರು ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗಲಿದೆ. ಬೆಂಗಳೂರಿನ ಜಯದೇವ ಆಸ್ಪತ್ರೆಯ ಮಾದರಿಯಲ್ಲಿಯೇ ರೂ. 1.05 ಕೋಟಿ ವೆಚ್ಚದಲ್ಲಿ ‘ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬೊರೇಟರಿ’ ಸ್ಥಾಪಿಸಲಾಗಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮುರುಘಾ ಮಠದಲ್ಲಿ ಸಾಮೂಹಿಕ ಕಲ್ಯಾಣ ಮಹೋತ್ಸವ | 21 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದರ್ಪಣೆ 

ಎಚ್‍ಡಿಎಫ್‍ಸಿ ಬ್ಯಾಂಕ್ ಸಿ.ಎಸ್.ಆರ್ ನಿಧಿಯಡಿ 100 ಫೌಲರ್ಸ್ ಕಾಟ್‍ಗಳು, ಬೆಡ್ ಸೈಡ್ ಲಾಕರ್‍ಗಳು, ತಲಾ 10 ಸಂಖ್ಯೆಯ ಸಿ-ಪ್ಯಾಪ್ ಯಂತ್ರಗಳು, ಮಾನಿಟರ್‍ಗಳು, ಇಸಿಜಿ ಯಂತ್ರಗಳು, ಬೇಬಿ ವಾರ್ಮರ್ ಹಾಗೂ ಫೋಟೋಥೆರಪಿ ಹಾಗೂ ರೂ. 28 ಲಕ್ಷ ಮೌಲ್ಯದ ತಲಾ ಎರಡು ಅತ್ಯಾಧುನಿಕ ಅರಿವಳಿಕೆ ಯಂತ್ರಗಳನ್ನು ಜಿಲ್ಲಾಸ್ಪತ್ರೆಗೆ ನೀಡಿದೆ. ಶೀಘ್ರವೇ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವುದಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಪಿ. ರವೀಂದ್ರ ತಿಳಿಸಿದರು.

ಆಧುನಿಕ ಲ್ಯಾಬ್ ಹಾಗೂ ಸ್ಕ್ಯಾನಿಂಗ್ ಸೌಲಭ್ಯ: ರೂ.30 ಲಕ್ಷ ವೆಚ್ಚದಲ್ಲಿ ಅತ್ಯಾಧುನಿಕ ಲ್ಯಾಬ್ ಉಪಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು, ಲ್ಯಾಬ್‍ನಲ್ಲಿ ಒಂದೇ ಬಾರಿಗೆ 240 ರಿಂದ 400 ಟೆಸ್ಟ್‍ಗಳನ್ನು ನಡೆಸಬಹುದು. ಕಿಡ್ನಿ, ಲಿವರ್ ಹಾಗೂ ಹೃದಯ ಸಂಬಂಧಿ ಪರೀಕ್ಷೆಗಳ ವರದಿಗಳು ಇನ್ನೂ ಮುಂದೆ ಅತ್ಯಂತ ವೇಗವಾಗಿ ರೋಗಿಗಳಿಗೆ ತಲುಪಿಸಲಾಗುವುದು. 

ರೂ.50 ಲಕ್ಷ ವೆಚ್ಚದಲ್ಲಿ ಉದರದರ್ಶಕ (ಎಂಡೋಸ್ಕೋಪಿ) ಸಿಸ್ಟಮ್ ಅನ್ನು ಅಳವಡಿಸಲಾಗಿದೆ. ಇದು ಅನ್ನನಾಳ ಮತ್ತು ಗುದದ್ವಾರದ ಕ್ಯಾನ್ಸರ್ ಪತ್ತೆಗೆ ಸಹಕಾರಿಯಾಗಿದ್ದು, ಈಗಾಗಲೇ 112 ತಪಾಸಣೆಗಳನ್ನು ಮಾಡಲಾಗಿದೆ. ಸ್ತನ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಮೆಮೊಗ್ರಫಿ ಸೌಲಭ್ಯವನ್ನು ಅಳವಡಿಸಲಾಗಿದೆ. ಹಲ್ಲಿನ ಚಿಕಿತ್ಸೆಗಾಗಿ 360 ಡಿಗ್ರಿಯಲ್ಲಿ ಚಿತ್ರೀಕರಿಸುವ ಅತ್ಯಾಧುನಿಕ ಒಪಿಜಿ ಎಕ್ಸ್-ರೇ ಯಂತ್ರವನ್ನು ರೂ.15 ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದು, ಹೊಸ ಡೆಂಟಲ್ ಚೇರ್‍ಗಳನ್ನೂ ಸಹ ಒದಗಿಸಲಾಗಿದೆ ಎಂದರು.

ಜಿಲ್ಲಾಸ್ಪತ್ರೆ ನವೀಕರಣ: 

ಜಿಲ್ಲಾಸ್ಪತ್ರೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸುಂದರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಸುಮಾರು 4 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಯ ನವೀಕರಣ ಕಾರ್ಯ ನಡೆಯುತ್ತಿದ್ದು, ವಾರ್ಡ್‍ಗಳಿಗೆ ಬಣ್ಣ ಬಳಿಯುವುದು, ಬ್ಲಡ್ ಬ್ಯಾಂಕ್ ನವೀಕರಣ ಹಾಗೂ ಒಪಿಡಿ ಬ್ಲಾಕ್ ಹೊರಗಡೆ ನೋಂದಣಿ ಕೌಂಟರ್ ಸ್ಥಾಪಿಸುವ ಕಾರ್ಯಗಳು ಪ್ರಗತಿಯಲ್ಲಿವೆ. 

ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ

ಹೊರರೋಗಿ ವಿಭಾಗವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ಸಿಎಸ್‍ಆರ್ ನಿಧಿಯಡಿ ರೂ.7 ಲಕ್ಷ ವೆಚ್ಚದಲ್ಲಿ 50 ರಿಂದ 100 ಜನ ಕುಳಿತುಕೊಳ್ಳಬಹುದಾದ ವಿಶಾಲವಾದ ತಂಗುದಾಣ ನಿರ್ಮಿಸಲಾಗಿದ್ದು, ಇದು ಮಳೆ ಮತ್ತು ಬೇಸಿಗೆ ಕಾಲದಲ್ಲಿ ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಪಡೆಯಲು ಸಹಕಾರಿಯಾಗಿದೆ. ಇದರೊಂದಿಗೆ ಮೃತದೇಹಗಳನ್ನು ಸಂರಕ್ಷಿಸಿಡಲು ಸಂಸದರ ನಿಧಿಯಡಿ ರೂ. 10 ಲಕ್ಷ ವೆಚ್ಚದಲ್ಲಿ ಹೊಸದಾಗಿ ನಾಲ್ಕು ‘ಹೈ ಕೋಲ್ಡ್ ಬಾಕ್ಸ್’ಗಳನ್ನು ಅಳವಡಿಸಲಾಗಿದೆ. 

ಆಸ್ಪತ್ರೆಯ ಸ್ವಚ್ಛತೆಗೆ ಪೂರಕವಾಗಿ ಲಾಂಡ್ರಿ ವಿಭಾಗಕ್ಕೆ ಹೊಸದಾಗಿ ಒಂದು ಟಂಬಲ್ ಡ್ರೈಯರ್ ಹಾಗೂ ಮೂರು ಸೆಮಿ ಡ್ರೈಯರ್ ಯಂತ್ರಗಳನ್ನು ಅಳವಡಿಸಲಾಗಿದೆ. ಕೆಟ್ಟು ಹೋಗಿದ್ದ ಐರನ್ ಮೆಷಿನ್ ಅನ್ನು ಸಹ ದುರಸ್ತಿಗೊಳಿಸಿಲಾಗಿದೆ ಎಂದರು.

ತಾಯಿ ಮತ್ತು ಮಕ್ಕಳ ಆರೈಕೆಗೆ ವಿಶೇಷ ಒತ್ತು: 

ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸುಸಜ್ಜಿತ ಹೆರಿಗೆ ಕೊಠಡಿ, ಆಪರೇಷನ್ ಥಿಯೇಟರ್, ನವಜಾತ ಶಿಶುಗಳ ನಿಗಾ ಘಟಕ ಹಾಗೂ ಹೈ-ರಿಸ್ಕ್ ಗರ್ಭಿಣಿಯರ ಆರೈಕೆಗಾಗಿ ವಿಶೇಷ ವಾರ್ಡ್‍ಗಳನ್ನು ಸಜ್ಜುಗೊಳಿಸಲಾಗಿದೆ. ಅಪೌಷ್ಟಿಕ ಮಕ್ಕಳ ಚಿಕಿತ್ಸೆಗಾಗಿ ಎನ್‍ಆರ್‍ಸಿ ಕೇಂದ್ರ ಹಾಗೂ ಮಕ್ಕಳಲ್ಲಿನ ಜನ್ಮಜಾತ ದೋಷಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಚಿಕಿತ್ಸೆ ನೀಡಲು ಜಿಲ್ಲಾ ಮುಂಚಿತ ಹಸ್ತಕ್ಷೇಪ ಕೇಂದ್ರ (DEIC) ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. 

ಇದನ್ನೂ ಓದಿ: ಚಳ್ಳಕೆರೆ | ಏ.8ರಂದು ರಾಣಿಕೆರೆ ಒತ್ತುವರಿ ತೆರವು ಕಾರ್ಯಾಚರಣೆ

3,060 ಮಕ್ಕಳಿಗೆ ಆರಂಭಿಕ ರೋಗನಿರ್ಣಯ ಮಾಡಲಾಗಿದೆ. ದೃಷ್ಟಿ ದೋಷ, ಶ್ರವಣ ದೋಷ ಹಾಗೂ ಬುದ್ಧಿಮಾಂದ್ಯತೆಯಂತಹ ಸಮಸ್ಯೆಗಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಲಾಗುತ್ತಿದೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದ 206 ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ಲಭ್ಯವಿಲ್ಲದ ಸೂಪರ್ ಸ್ಪೆಷಾಲಿಟಿ ತಜ್ಞರನ್ನು ವಾರಕ್ಕೊಮ್ಮೆ ಕರೆಸಿ ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ನರರೋಗ ತಜ್ಞರು ಪ್ರತಿ ಶುಕ್ರವಾರ, ಹೃದ್ರೋಗ ತಜ್ಞರು ಪ್ರತಿ ಗುರುವಾರ, ಮೂತ್ರಪಿಂಡ ತಜ್ಞರು ಪ್ರತಿ ಶನಿವಾರ ಹಾಗೂ ಮಕ್ಕಳ ಹೃದ್ರೋಗ ತಜ್ಞರು ಪ್ರತಿ ತಿಂಗಳ ಮೊದಲ ಬುಧವಾರದಂದು ಲಭ್ಯವಿರುತ್ತಾರೆ. 

ಅಲ್ಲದೆ, ಕ್ಯಾನ್ಸರ್ ತಜ್ಞರು ವಾರಕ್ಕೆ ಮೂರು ದಿನ ಲಭ್ಯವಿದ್ದು ಶಸ್ತ್ರ ಚಿಕಿತ್ಸೆ ಹಾಗೂ ಕೀಮೋಥೆರಪಿ ಸಲಹೆಗಳನ್ನು ನೀಡುತ್ತಿದ್ದಾರೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನಮ್ಮ ಪ್ರಮುಖ ಗುರಿ ಎಂದರು.

ವೈದ್ಯಕೀಯ ಕಾಲೇಜು ಸೇವೆ ಲಭ್ಯ:  

ಜಿಲ್ಲಾಸ್ಪತ್ರೆಯು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರವಾಗಿ ಮೇಲ್ದರ್ಜೆಗೇರಿರುವ ಹಿನ್ನೆಲೆ ಸಿಬ್ಬಂದಿ ಕೊರತೆ ನೀಗಿದೆ. ವಿವಿಧ ವಿಭಾಗಗಳಿಗೆ 30 ಹೊಸ ವೈದ್ಯರು, 30 ನುರಿತ ಶುಶ್ರೂಷಾಧಿಕಾರಿಗಳು ಹಾಗೂ 14 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಿಂದ ರೋಗಿಗಳಿಗೆ ಹೆಚ್ಚಿನ ಚಿಕಿತ್ಸಾ ಸೌಲಭ್ಯ ದೊರೆಯುತ್ತಿದೆ. 

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ

ಒಂದೇ ಕೊಠಡಿಯಲ್ಲಿ ಮೂವರು ವೈದ್ಯರು ಏಕಕಾಲಕ್ಕೆ ರೋಗಿಗಳನ್ನು ಪರೀಕ್ಷಿಸಲು ಅನುಕೂಲವಾಗುವಂತೆ ಪಾರ್ಟಿಷನ್ ಮಾಡಲಾಗಿದ್ದು, ಟೈಲ್ಸ್ ಅಳವಡಿಸಿ ಸುಂದರಗೊಳಿಸಲಾಗಿದೆ. ಇದರಿಂದ ಜನರಲ್ ಸರ್ಜರಿ, ಆರ್ಥೋಪೆಡಿಕ್, ಚರ್ಮದ ವಿಭಾಗ, ಇಎನ್‍ಟಿ, ಫಿಸಿಯೋಥೆರಪಿ ಹಾಗೂ ಮೆದುಳು ಸಂಬಂಧಿ ವಿಭಾಗಗಳಲ್ಲಿ ರೋಗಿಗಳಿಗೆ ಶೀಘ್ರವಾಗಿ ಚಿಕಿತ್ಸೆ ದೊರೆಯಲಿದೆ ಎಂದರು.

ಕಳೆದ 2025-26ನೇ ಸಾಲಿನ ಅಂಕಿ-ಅಂಶಗಳ ಮಾಹಿತಿ ನೀಡಿದ ಜಿಲ್ಲಾ ಶಸ್ತ್ರಚಿಕಿತ್ಸಕರು, ಆಸ್ಪತ್ರೆಯಲ್ಲಿ 3,96,997 ಹೊರರೋಗಿಗಳು ಹಾಗೂ 49,682 ಒಳರೋಗಿಗಳು ಚಿಕಿತ್ಸೆ ಪಡೆದಿದ್ದಾರೆ. 11,343 ಎಂಆರ್‍ಐ ಮತ್ತು 6,632 ಸಿಟಿ ಸ್ಕ್ಯಾನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಹೆರಿಗೆ ವಿಭಾಗದಲ್ಲಿ 1,734 ಸಹಜ ಹೆರಿಗೆ ಹಾಗೂ 4,225 ಸಿಸೇರಿಯನ್ ಶಸ್ತ್ರ ಚಿಕಿತ್ಸೆಗಳಾಗಿವೆ. 

ಇನ್ನುಳಿದಂತೆ 1,196 ಮೇಜರ್ ಸರ್ಜರಿ, 971 ಮೂಳೆ ಶಸ್ತ್ರಚಿಕಿತ್ಸೆ ಹಾಗೂ 1,944 ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. 64 ರಕ್ತದಾನ ಶಿಬಿರಗಳ ಮೂಲಕ 4,508 ಯೂನಿಟ್ ರಕ್ತ ಸಂಗ್ರಹಿಸಿ, 4,667 ಮಂದಿಗೆ ವಿತರಿಸಲಾಗಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ 110 ರೋಗಿಗಳಿಗೆ ಕಳೆದ ಸಾಲಿನಲ್ಲಿ ಸುಮಾರು 10,619 ಸೈಕಲ್‍ಗಳಷ್ಟು ಡಯಾಲಿಸಿಸ್ ಚಿಕಿತ್ಸೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು

ಎಂಆರ್‍ಐ ಅಥವಾ ಸ್ಕ್ಯಾನಿಂಗ್‍ಗಾಗಿ ರೋಗಿಗಳು ದಿನಗಟ್ಟಲೆ ಕಾಯಬೇಕಿತ್ತು. ಆದರೆ ಈಗ ವ್ಯವಸ್ಥೆ ಸುಧಾರಿಸಿದ್ದು, ನೋಂದಾಯಿತ ದಿನವೇ ಸ್ಕ್ಯಾನಿಂಗ್ ಸೌಲಭ್ಯ ದೊರೆಯುತ್ತಿದೆ. ಕಳೆದ ಸಾಲಿನಲ್ಲಿ ಪ್ರಯೋಗಾಲಯದಲ್ಲಿ ಒಟ್ಟು 9,80,412 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊರರೋಗಿ ವಿಭಾಗದಲ್ಲಿ 2,67,438 ಜನ ಚಿಕಿತ್ಸೆ ಪಡೆದಿದ್ದು, ಅದರಲ್ಲಿ 97,918 ಜನ ರಾತ್ರಿ ವೇಳೆಯಲ್ಲಿ ತುರ್ತು ಸೇವೆ ಪಡೆದಿದ್ದಾರೆ. ಹಾವು ಕಡಿತದ 658 ಪ್ರಕರಣಗಳಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ 656 ರೋಗಿಗಳನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ವತಿಯಿಂದ ರೂ.8 ಲಕ್ಷ ವೆಚ್ಚದಲ್ಲಿ ನೀಡಲಾಗಿರುವ ‘ಬೆರಾ’ ಪರೀಕ್ಷಾ ಯಂತ್ರವನ್ನು ಶೀಘ್ರದಲ್ಲೇ ಅಳವಡಿಸಲಾಗುವುದು. ಇದು ಶಿಶುಗಳಲ್ಲಿನ ಕಿವುಡುತನ ಪತ್ತೆಹಚ್ಚಲು ಸಹಕಾರಿಯಾಗಲಿದ್ದು, ಆಸ್ಪತ್ರೆಯಲ್ಲಿ ಸೌಂಡ್ ಪ್ರೂಫ್ ಕೊಠಡಿಯನ್ನೂ ಸಜ್ಜುಗೊಳಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ಹೇಳಿದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDistrict HospitalWell-equipped new hospitalಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಸ್ಪತ್ರೆಸುಸಜ್ಜಿತ ಹೊಸ ಆಸ್ಪತ್ರೆ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಏಪ್ರಿಲ್ 06 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
Next Article ARECANUT RATE ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
Leave a Comment

Leave a Reply Cancel reply

Your email address will not be published. Required fields are marked *

Damaged electronic item
ಹಾಳಾದ ಎಲೆಕ್ಟ್ರಾನಿಕ್ ವಸ್ತುಗಳನ್ನು ಮನೆಯಲ್ಲಿ ಇಡುವುದರಿಂದ ಏನಾಗುತ್ತದೆ ಗೊತ್ತಾ?
Life Style
ರೈತರ ತರಬೇತಿ ಕಾರ್ಯಕ್ರಮ
ರೈತರು ಹನಿ ನೀರಾವರಿ, ಸಾವಯವ ಪದ್ಧತಿ ಅಳವಡಿಸಿಕೊಳ್ಳಿ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
ಟಿ. ರಘುಮೂರ್ತಿ
ತಪ್ಪದೇ ಎಲ್ಲಾ ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಿ | ಶಾಸಕ ಟಿ.ರಘುಮೂರ್ತಿ
ಮುಖ್ಯ ಸುದ್ದಿ
Apply this tomato scrub to remove stubborn tanning
ಮೊಂಡುತನದ ಟ್ಯಾನಿಂಗ್ ಅನ್ನು ತೆಗೆದುಹಾಕಲು ಹಚ್ಚಿ ಈ ಟೊಮೆಟೊ ಸ್ಕ್ರಬ್
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up