CHITRADURGA NEWS | 22 OCTOBER 2026
ಚಿತ್ರದುರ್ಗ: ದುಶ್ಚಟಗಳಿಂದ ದೂರವಿದ್ದಾಗ ಆರೋಗ್ಯಪೂರ್ಣ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದು ಡಯಟ್ ಉಪನ್ಯಾಸಕ ಎಸ್. ಬಸವರಾಜು ಹೇಳಿದರು.
ಇದನ್ನೂ ಓದಿ: ಕಸಾಪ ವತಿಯಿಂದ ರಾಜ್ಯ ಮಟ್ಟದ ಕವಿಗೋಷ್ಠಿ
ನಗರದ ಡಯಟ್ನಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರಿನ ಸಿದ್ದಾರ್ಥ ಬಿ.ಇಡಿ. ಕಾಲೇಜಿನ ಪ್ರಶಿಕ್ಷಣಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು ಮತ್ತು ಡಯಟ್ನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಚಟಕ್ಕೆ ಒಮ್ಮೆ ದಾಸರಾದರೆ ಅದರಿಂದ ಹೊರಬರುವುದು ಕಷ್ಟ. ತಂಬಾಕು ಮತ್ತು ಗುಟ್ಕಾ ಸೇವನೆಯು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಬಳಕೆಯಿಂದ ಮಾನಸಿಕ ನಿಯಂತ್ರಣ ಕಳೆದುಕೊಳ್ಳುವ ಪರಿಸ್ಥಿತಿ ಉಂಟಾಗುತ್ತದೆ. ಇದರಿಂದ ಆರ್ಥಿಕ ನಷ್ಟದ ಜತೆಗೆ ಆರೋಗ್ಯ ಹದಗೆಟ್ಟು ಕುಟುಂಬದಲ್ಲಿಯೂ ನೆಮ್ಮದಿ ಇಲ್ಲದಂತಾಗುತ್ತದೆ ಎಂದು ತಿಳಿಸಿದರು.
ಪ್ರೌಢಶಾಲಾ ಹಂತವು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ಬಳಕೆ ವ್ಯಕ್ತಿಯ ಜೀವನದ ಮೇಲೆ ದುಷ್ಪರಿಣಾಮ ಬೀರುವುದರ ಜತೆಗೆ ಸಮಾಜವಿರೋಧಿ ಚಟುವಟಿಕೆಗಳಿಗೆ ಪ್ರೇರಣೆಯಾಗಬಹುದು. ಆದ್ದರಿಂದ ಇಂತಹ ದುಶ್ಚಟಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಶರಣ ಸಂಸ್ಕೃತಿ ಉತ್ಸವದಲ್ಲಿ ಶೂನ್ಯಪೀಠಾರೋಹಣ ವೈಭವ
ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ವಿದ್ಯಾರ್ಥಿಗಳಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಬೇಕು. ನೈತಿಕ ಮೌಲ್ಯಗಳನ್ನು ಬೋಧಿಸುವ ಮೂಲಕ ಅವರು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಲು ಮಾರ್ಗದರ್ಶನ ನೀಡಬೇಕು ಎಂದರು.
ಕಾರ್ಯಾಗಾರದಲ್ಲಿ ಉಪನ್ಯಾಸಕ ಶಂಕರನಾಯ್ಕ, ಸಿದ್ದಾರ್ಥ ಬಿ.ಇಡಿ. ಕಾಲೇಜಿನ ಉಪನ್ಯಾಸಕರಾದ ಕೊಟ್ರೇಶ್, ರಾಘವೇಂದ್ರ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

