Connect with us

    ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಮೃತಪಟ್ಟ ವ್ಯಕ್ತಿ

    ಕ್ರೈಂ ಸುದ್ದಿ

    ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಮೃತಪಟ್ಟ ವ್ಯಕ್ತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 21 JANUARY 2024

    ಚಿತ್ರದುರ್ಗ: ತಾಲೂಕಿನ ಹೆಗ್ಗೆರೆ ಗ್ರಾಮದ ಭೀಮೇಶ್(35) ಜಮೀನಿನಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದಾರೆ.

    ಕೃಷಿ ಕೆಲಸ ಮಾಡಿಕೊಂಡಿದ್ದ ಭೀಮೇಶ್, ಬೆಳೆ ನಿರ್ವಹಣೆಗಾಗಿ ಕೆನರಾ ಬ್ಯಾಂಕಿನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಕೈಗಡವಾಗಿ 2.4 ಲಕ್ಷ ರೂ ಸಾಲ ತೆಗೆದುಕೊಂಡಿದ್ದಾರೆ.

    ಇದನ್ನೂ ಓದಿ: ಸಿಲಿಂಡರ್ ಸ್ಪೋಟ | ಬೆಂಕಿ ತಗುಲಿ ಮಹಿಳೆ ಸಾವು

    ಆದರೆ, ಸಕಾಲಕ್ಕೆ ಮಳೆಯಾಗದೆ, ಬೆಳೆಯೂ ಇಲ್ಲದೆ ಸಾಲದ ಕಂತು ಕಟ್ಟಲು ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಜಿಗುಪ್ಸೆ ಹೊಂದಿ ಜ.20 ರಂದು ರಾತ್ರಿ ಜಮೀನಿಗೆ ಹೋಗಿ ವಿಷ ಸೇವಿಸಿದ್ದಾರೆ.

    ವಿಷಯ ತಿಳಿದು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಭರಮಸಾಗರ POLICE ಠಾಣೆಯಲ್ಲಿ ದೂರು ದಾಖಲಾಗಿದೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top