CHITRADURGA NEWS | 26 APRIL 2024
ಚಿತ್ರದುರ್ಗ: ಲೋಕಸಭೆ ಚುನಾವಣೆಯಲ್ಲಿ ಸಹಾಯಕ ಮತಗಟ್ಟೆ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ 58 ವರ್ಷದ ಶಿಕ್ಷಕಿ ಯಶೋಧಮ್ಮ ಮೃತಪಟ್ಟಿದ್ದಾರೆ.
ಚಳ್ಳಕೆರೆ ತಾಲೂಕಿನ ಹೊಟೆಪ್ಪನಹಳ್ಳಿ ಸಮೀಪದ ಗೊಲ್ಲರಹಟ್ಟಿ ಮತಗಟ್ಟೆಯಲ್ಲಿ ಚುನಾವಣಾ ಕೆಲಸ ಮಾಡುತ್ತಿದ್ದರು.
ಮಧ್ಯಾಹ್ನದ ಹೊತ್ತಿಗೆ ಹೃದಯಾಘಾತದಿಂದ ಯಶೋಧಮ್ಮ ಮೃತಪಟ್ಟಿದ್ದು, ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಬೊಮ್ಮಸಂದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಬಿ.ಆನಂದ್, ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ.
ಆರೋಗ್ಯ ಸಮಸ್ಯೆ ಹೇಳಿಕೊಂಡು ಕರ್ತವ್ಯದಿಂದ ಕೈ ಬಿಡುವಂತೆ ನಮ್ಮ ಬಳಿ ಕೇಳಿಕೊಂಡಿರಲಿಲ್ಲ. ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದಾರೆ. ರಕ್ತದೊತ್ತಡ ಕಡಿಮೆಯಾಗಿದ್ದು, ಆಸ್ಪತ್ರೆಗೆ ಕರೆತರುವ ವೇಳೆ ದಿಢೀರನೆ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
