
CHITRADURGA NEWS | 10 APRIL 2024
ಚಿತ್ರದುರ್ಗ: ಬುಧವಾರ ನಸುಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ಹೊರವಲಯದ ಕ್ಯಾದಿಗೆರೆ ಬಳಿ ಎಸ್‍ಆರ್‍ಇ ಬಸ್ ತಮಿಳುನಾಡು ಮೂಲದ ಲಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಹಲವು ಮಂದಿ ಗಾಯಗೊಂಡಿದ್ದು, ತಕ್ಷಣ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ನಸುಕಿನಲ್ಲಿ ಖಾಸಗಿ ಬಸ್ ಪಲ್ಟಿ | ಭೀಕರ ಅಪಘಾತ | ಸ್ಥಳದಲ್ಲೇ ಮೂವರ ದುರ್ಮರಣ
ಬಸ್ ಚಾಲಕ ಓವರ್‍ಟೇಕ್ ಮಾಡುವ ಭರದಲ್ಲಿ ಲಾರಿಗೆ ಡಿಕ್ಕಿ ಹೊಡೆಸಿದ್ದಾನೆ ಎಂದು ಗಾಯಾಳುಗಳು ದೂರಿದ್ದಾರೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಬಸ್ಸಿನಲ್ಲಿ ಬಿಜಾಪುರ, ಕಲಬುರಗಿ ಭಾಗದ ಜನರಿದ್ದರು ಎನ್ನಲಾಗಿದೆ.
ಯುಗಾದಿಗೆ ಒಂದು ದಿನ ಹೊಳಲ್ಕೆರೆ ಬಳಿಯ ಹನುಮಂತ ದೇವರ ಕಣಿವೆಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿತ್ತು. ಇದಾದ ಎರಡು ದಿನಗಳಲ್ಲೇ ಚಿತ್ರದುರ್ಗ ಬಳಿ ಮತ್ತೊಂದು ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಇದನ್ನೂ ಓದಿ: ಯುಗಾದಿಯಲ್ಲಿ 4 ರಾಶಿಗೆ ರಾಜಯೋಗ | ಹಬ್ಬದ ಸಂಭ್ರಮದಲ್ಲಿ ಜೊತೆಯಾಗಲಿದೆ ಅದೃಷ್ಟ


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
