
CHITRADURGA NEWS | 25 MAY 2024
ಚಿತ್ರದುರ್ಗ: ಧರ್ಮಸ್ಥಳಕ್ಕೆ ತೆರಳಿ ವಾಪಾಸಾಗುವಾಗ ನಡೆದ ಅಪಘಾತದಲ್ಲಿ ಮಡಿದ ನಾಲ್ವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಿಸಿದ್ದಾರೆ.
ಇದನ್ನೂ ಓದಿ: ಓಮಿನಿ-ಲಾರಿ ನಡುವೆ ಭೀಕರ ಅಪಘಾತ | ಚಿತ್ರದುರ್ಗ ಜಿಲ್ಲೆಯ ನಾಲ್ವರ ದುರ್ಮರಣ
ಧರ್ಮಸ್ಥಳಕ್ಕೆ ತೆರಳಿದ್ದ ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರು ಸಮೀಪದ ಚನ್ನಪಟ್ಟಣ ಗ್ರಾಮದ ಒಂದೇ ಕುಟುಂಬದ ನಾಲ್ವರು ವಾಪಾಸಾಗುವಾಗ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಮಿನಿ ಹಾಗೂ ಮೆಸ್ಕಾಂ ಲಾರಿ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.
ಇದನ್ನೂ ಓದಿ: ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ | ಮೂರು ದಿನದ ಬಳಿಕ ಮತ್ತೆ ಹಾಜರಾದ ಮಳೆರಾಯ
ಚನ್ನಪಟ್ಟಣದ ಹಂಪಯ್ಯ (62), ಪ್ರೇಮಾ (58), ಮಂಜಯ್ಯ (60), ಪ್ರಭಾಕರ್ (40) ಮೃತ ದುರ್ದೈವಿಗಳು.

ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗದ ಜಿಲ್ಲಾಧಿಕಾರಿಗಳು ಚಿಕ್ಕಮಗಳೂರಿನ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ವೈದ್ಯಕೀಯ ತಪಾಸಣೆಗಳ ನಂತರ ಮೃತರ ಕಳೇಬರವನ್ನು ಮೃತ ಕುಟುಂಬದವರಿಗೆ ತಲುಪಿಸಿ ಅಂತ್ಯಕ್ರಿಯೆ ಮಾಡಿಸುವಲ್ಲಿ ಸಹಕರಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
