
CHITRADURGA NEWS | 21 FEBRUARY 2026
ಚಿತ್ರದುರ್ಗ: ಜಿಲ್ಲಾ ನ್ಯಾಯಾಲಯ ಸ್ಥಾಪಿಸಿ ಶತಮಾನವಾಗುತ್ತಿದ್ದು, ವಕೀಲರ ಸಂಘದ ಮನವಿಯಂತೆ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಗತ್ಯವಾದ ಸೂಕ್ತ ಅನುದಾನ ಕೊಡಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದು ಚಿತ್ರದುರ್ಗ ಸಂಸದರಾದ ಗೋವಿಂದ ಎಂ.ಕಾರಜೋಳ ಭರವಸೆ ನೀಡಿದರು.
ಇದನ್ನೂ ಓದಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ SSLC ಫಲಿತಾಂಶ ಕಡಿಮೆ | ಸಚಿವ ಡಿ.ಸುಧಾಕರ್ ಅಸಮಾಧಾನ
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶನಿವಾರ ನ್ಯಾಯಾಂಗ ಇಲಾಖೆ, ಲೋಕೋಪಯೋಗಿ ಇಲಾಖೆ, ಜಿಲ್ಲಾ ವಕೀಲರ ಸಂಘ, ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಕೀಲರ ಸಂಘದ ನೂತನ ಕಂಪ್ಯೂಟರ್ ಕೊಠಡಿ ಉದ್ಘಾಟಿಸಿ ಮಾತನಾಡಿ, ನಿಮ್ಮ ಕಕ್ಷಿದಾರರೇ ನಮಗೆ ಮತದಾರರು, ಅವರ ಹಿತಕಾಯುವುದು ಸಂಸದರ ಮತ್ತು ವಕೀಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ನಿಮ್ಮೊಂದಿಗೆ ಸದಾ ಇರುವೆ ಎಂದರು.
ಜಿಲ್ಲೆಯಲ್ಲಿ ಬಿಸಿಲಿನ ತಾಪ ಬೇಸಿಗೆಯಲ್ಲಿ ಹೆಚ್ಚಾಗಿರುತ್ತದೆ, ಹೀಗಾಗಿ ವಕೀಲರ ಸುರಕ್ಷಿತೆ ಹಿನ್ನೆಲೆಯಲ್ಲಿ ಕೊಠಡಿಯನ್ನು ಇನ್ನಷ್ಟು ಉತ್ತಮವಾಗಿ ತಂಪಾಗಿರುವಂತೆ ಮಾಡಿ ಎಂದು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ನಾಗರಾಜ್ ಅವರಿಗೆ ಸಂಸದರು ಸೂಚಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಮಾತನಾಡಿ, ಚಿತ್ರದುರ್ಗ ಜಿಲ್ಲೆ ತಂತ್ರಜ್ಞಾನ ಬಳಕೆಯಲ್ಲಿ ಹಿಂದುಳಿದಿದೆ. ನ್ಯಾಯಾಲಯದಲ್ಲಿ ಮುಂದಿನ ದಿನಗಳಲ್ಲಿ ನಿರೀಕ್ಷಣಾ ಜಾಮೀನು ಮತ್ತು ಬೇಲ್ ( ಜಾಮೀನು) ಎರಡನ್ನೂ ಆನ್‍ಲೈನ್‍ನಲ್ಲೇ ಮಾಡುವ ಹಿನ್ನೆಲೆಯಲ್ಲಿ ಎಲ್ಲರೂ ಕಂಪ್ಯೂಟರ್ ಕೊಠಡಿಯನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ಎಸ್. ಮಹೇಶ್ವರಪ್ಪ ಮಾತನಾಡಿ, ಸಂಸದರು ವಕೀಲರ ಪರವಾಗಿ ಧ್ವನಿ ಎತ್ತಬೇಕು. 60 ವಯಸ್ಸಿನ ನಂತರ ಪಿಂಚಣಿ ಹಾಗೂ ಜಿಲ್ಲೆಯಲ್ಲಿ ವಕೀಲರಿಗೆ ಸಮುದಾಯ ಭವನ ಅಗತ್ಯವಾಗಿದ್ದು, ಕೂಡಲೇ ವ್ಯವಸ್ಥೆ ಮಾಡಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವೀರಣ್ಣ ಸೋಮಶೇಖರ್, ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷೆ ಕೆ.ಎಸ್ ಸಾವಿತ್ರಮ್ಮ, ಪ್ರಧಾನ ಕಾರ್ಯದರ್ಶಿ ಹೆಚ್.ಓ ಜಗದೀಶ ಗುಂಡೇರಿ, ಖಜಾಂಚಿ ಹೆಚ್. ಸೋಮಶೇಖರ್ ರೆಡ್ಡಿ, ಸಹ ಕಾರ್ಯದರ್ಶಿ ಹೆಚ್.ಟಿ ಕಾಂತರಾಜ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಸರ್ವ ಸದಸ್ಯರು, ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
