ಚಿತ್ರದುರ್ಗ ನ್ಯೂಸ್.ಕಾಂ:
ಮೊಳಕಾಲ್ಮೂರು ತಾಲೂಕಿನಲ್ಲಿ ಹಾದು ಹೋಗಿರುವ ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ.
ಬೈಕಿಗೆ ಇನ್ನೋವಾ ಕಾರು ಡಿಕ್ಕಿಯಾಗಿದ್ದು, ಬೈಕ್‍ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 150(ಎ) ರಲ್ಲಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಚಿತ್ರದುರ್ಗ ಡಿವೈಡರ್‍ಗಳ ಕುರಿತ ಚರ್ಚೆ
ಅಪಘಾತದಲ್ಲಿ ಮೃತಪಟ್ಟವರನ್ನು ಮೊಳಕಾಲ್ಮೂರು ತಾಲೂಕು ಕೋನಾಪುರ ನಿವಾಸಿಗಳಾದ 45 ವರ್ಷದ ಮಾರಣ್ಣ ಹಾಗೂ 44 ವರ್ಷದ ಶಂಕರ್ ಎಂದು ಗುರುತಿಸಲಾಗಿದೆ.
ರಾಂಪುರ ಪೊಲೀಸ್ ಠಾಣೆಯಲ್ಲಿ ಈ ಅಪಘಾತ ಪ್ರಕರಣ ದಾಖಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
