
CHITRADURGA NEWS | 25 JANUARY 2024
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸೇರಿದಂತೆ ಮೂರು ಕಂದಮ್ಮಗಳು ಸ್ಥಳದಲ್ಲೇ ಮೃತಪಟ್ಟಿವೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ 25 ವರ್ಷದ ಲಿಂಗಪ್ಪ, 2 ವರ್ಷದ ಸಿಂಧುಶ್ರೀ, 5 ತಿಂಗಳ ಕೂಸು ಅಯ್ಯಾಳಪ್ಪ, 3 ತಿಂಗಳ ಮತ್ತೊಂದು ಕೂಸು ರಕ್ಷಾ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜಮೀನಿನಲ್ಲಿ ನಾಗರಹಾವು ಕಚ್ಚಿ ಬಾಲಕ ಸಾವು
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿಯ ನಿವಾಸಿಗಳಾಗಿದ್ದಾರೆ.
ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಪಿಎಸ್‍ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
