CHITRADURGA NEWS | 5 APRIL 2026
ಮೊಳಕಾಲ್ಮೂರು: ಚಿತ್ರದುರ್ಗ ಜಿಲ್ಲೆಯ ಗಡಿ ಭಾಗ ಮೊಳಕಾಲ್ಮೂರು ತಾಲೂಕಿನ ರಾಜಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಕಾರು ಹಾಗೂ ಲಾರಿಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 4 ಏಪ್ರಿಲ್ | ಇಂದಿನ ಅಡಿಕೆ ರೇಟ್
ಅಪಘಾತದಲ್ಲಿ ಮೃತರಾದವರನ್ನು ರವಿಚಂದ್ರ(40) ಹಾಗೂ ಸಂತೋಷ್(25) ಎಂದು ಗುರುತಿಸಲಾಗಿದೆ. ಮೃತ ಇಬ್ಬರು ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಚಳ್ಳಕೆರೆ ಕಡೆಯಿಂದ ಬಳ್ಳಾರಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಲಾರಿಗೆ ಅಪ್ಪಳಿಸಿದೆ.
ಇದನ್ನೂ ಓದಿ:ಪ್ರತಿದಿನ 2 ಬಾರಿ ಹಲ್ಲುಜ್ಜಿದ ನಂತರವೂ ನಿಮ್ಮ ಹಲ್ಲುಗಳು ಹಾಳಾಗುತ್ತಿವೆಯೇ? ಅದಕ್ಕೆ ಕಾರಣವೇನು ಗೊತ್ತಾ?
ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ತಾಲೂಕು ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ರಾಂಪುರ ಠಾಣೆ ಪಿಎಸ್‌ಐ ಬಾಹುಬಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
