CHITRADURGA NEWS | 09 AUGUST 2025
ಚಿತ್ರದುರ್ಗ: ಅಳಿವಿನಂಚಿನಲ್ಲಿರುವ ಕಲೆಗಳನ್ನು ಉಳಿಸಿ ಬೆಳೆಸಬೇಕಾಗಿರುವುದರಿಂದ ಕಲೆಗಳ ಪುನಶ್ಚೇತನಕ್ಕೆ ಯೋಚಿಸುತ್ತಿದ್ದೇವೆ ಎಂದು ರಂಗಾಯಣ ನಿರ್ದೇಶಕ ಮೈಸೂರಿನ ಸತೀಶ ತಿಪಟೂರು ತಿಳಿಸಿದರು.
ಇದನ್ನೂ ಓದಿ: ವಾಣಿವಿಲಾಸ ಸಾಗರ ನೀರಿನ ಮಟ್ಟ | ಕಡಿಮೆ ಆಯ್ತು ಒಳಹರಿವು
ಕರ್ನಾಟಕ ಬಯಲಾಟ ಅಕಾಡೆಮಿ ಬಾಗಲಕೋಟೆ, ಸರ್ಕಾರಿ ಕಲಾ ಕಾಲೇಜು ಚಿತ್ರದುರ್ಗ ಇವುಗಳ ಸಹಯೋಗದೊಂದಿಗೆ ಚಿತ್ರದುರ್ಗ ಪರಿಸರದ ಬಯಲಾಟಗಳು ಎರಡು ದಿನಗಳ ವಿಚಾರ ಸಂಕಿರಣವನ್ನು ಸರ್ಕಾರಿ ಕಲಾ ಕಾಲೇಜಿನಲ್ಲಿ ಮೃದಂಗ ಬಾರಿಸುವ ಮೂಲಕ ಶನಿವಾರ ಉದ್ಘಾಟಿಸಿ ಮಾತನಾಡಿದರು.
ರಂಗ ಕಲೆಗಳಿಗೆ ಆರ್ಥಿಕವಾಗಿ ಬಲ ತುಂಬದಿದ್ದರೆ ಬಹಳ ಕಾಲ ಉಳಿಯುವುದಿಲ್ಲ. ದೊಡ್ಡಾಟ, ಬಯಲಾಟ, ಇನ್ನಿತರೆ ರಂಗ ಪ್ರಾಕಾರಗಳು ಜನಪದರ ಬದುಕಿನ ಒಂದು ಭಾಗ. ಶೂದ್ರ ಸಮುದಾಯದವರು ಕಲೆಗಳನ್ನು ಕಟ್ಟಿ ಬೆಳೆಸಿದ್ದಾರೆಯೇ ವಿನಃ ಮೇಲ್ವರ್ಗದವರಲ್ಲ. ಆರ್ಥಿಕವಾಗಿ ಕಲೆಗಳು ಸದೃಡವಾಗದಿದ್ದರೆ ಅಸ್ಪøಶ್ಯ ಕಲೆಗಳಾಗಿಯೇ ಉಳಿದುಬಿಡುತ್ತವೆಂದು ವಿಷಾಧಿಸಿದರು.
ಆರ್ಥಿಕ ಲಾಭಕ್ಕಾಗಿ ಕಲೆಗಳನ್ನು ಮೇಲ್ವರ್ಗದವರು ಹೈಜಾಕ್ ಮಾಡುತ್ತಿರುವುದರ ವಿರುದ್ದ ಕಲಾವಿದರು ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದರೆ ಸಾಂಸ್ಕøತಿಕ ನುಸುಳುಕೋರರಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ.
ಇದನ್ನೂ ಓದಿ: ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ | ಅರ್ಜಿ ಆಹ್ವಾನ
ಒಂದು ವರ್ಷದ ರಂಗಕಲೆ ಡಿಪ್ಲಮೋ ಕೋರ್ಸ್‍ನ್ನು ಎರಡು ವರ್ಷಗಳಿಗೆ ವಿಸ್ತರಿಸಿ ದಕ್ಷಿಣ ಭಾರತಕ್ಕೆ ವ್ಯಾಪಿಸಬೇಕು. ಬಯಲಾಟ ಕಾರ್ಯಾಗಾರವಾಗಬೇಕು. ರಂಗಕಲೆಗಳು ಯೂರೋಪಿಯನ್ ಮಾಡಲ್‍ಗಳಿರುವುದರಿಂದ ರಂಗಾಯಣ ರಂಗಶಾಲೆಯನ್ನು ದ್ರವಿಡಿಯನ್ ಇನ್ಸಿಟಿಟ್ಯೂಟ್ ಶಾಲೆಗಳನ್ನಾಗಿ ಮಾರ್ಪಡಿಸಬೇಕಿದೆ ಎಂದು ಸಲಹೆ ನೀಡಿದರು.
ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಪ್ರೊ.ಕೆ.ಆರ್.ದುರ್ಗಾದಾಸ್, ವಿದ್ಯಾರ್ಥಿಗಳು, ಯುವ ಜನಾಂಗ ಪಾರಂಪರಿಕ ಕಲೆಗಳನ್ನು ತಿಳಿದುಕೊಳ್ಳಬೇಕು. ರಂಗಭೂಮಿಯನ್ನು ಕಟ್ಟಿದವರು ಅನಕ್ಷರಸ್ಥರು, ರೈತರು, ಕೂಲಿಕಾರರು. ಇವರುಗಳಿಗೆ ಪುರಾಣಗಳಲ್ಲಿ ವಾದ್ಯಗಳನ್ನು ನುಡಿಸುವುದು ಗೊತ್ತು. ಕಲಾವಿದರ ಪ್ರದರ್ಶನಕ್ಕೆ ಆರ್ಥಿಕ ಸಂಪನ್ಮೂಲ ಗಟ್ಟಿಯಾಗಬೇಕು.
ಶ್ರಮಿಕ ವರ್ಗದಿಂದ ಮಾತ್ರ ಇನ್ನು ಬಯಲಾಟ ಕಲೆ ಉಳಿದಿದೆ. ಚಿತ್ರದುರ್ಗಕ್ಕೆ ಹತ್ತಿರವಾಗಿರುವ ಹಳ್ಳಿಗಳಲ್ಲಿ ಅನೇಕ ಕಥೆಗಾರರಿದ್ದಾರೆ. ಬಯಲಾಟ ಸರಳ ಮತ್ತು ಸುಲಭವಾದ ಸಂವಹನ. ಜಿಲ್ಲೆಯ ಪಾರಂಪರಿಕ ಕಲೆ ಬಯಲಾಟವನ್ನು ಉಳಿಸಬೇಕಿದೆ ಎಂದು ಮನವಿ ಮಾಡಿದರು.
ಇದನ್ನೂ ಓದಿ: ಅಭಿವೃದ್ಧಿ ನಿಗಮಗಳಿಂದ ವಿವಿಧ ಸೌಲಭ್ಯ | ಯಾರಿಗೆ ಯಾವ ಸೌಲಭ್ಯ, ಇಲ್ಲಿದೆ ಮಾಹಿತಿ…
ರಂಗ ಸಮಾಜ ಸದಸ್ಯ ಡಾ.ರಾಜಪ್ಪ ದಳವಾಯಿ ಮಾತನಾಡಿ, ಜಾತ್ಯತೀತ, ಮಾನವೀಯ ಮೌಲ್ಯಗಳು ಬಯಲಾಟದಲ್ಲಿದೆ. ಊರೊಂದಿಗೆ ಸಂಬಂಧಗಳನ್ನು ಉಳಿಸಿಕೊಳ್ಳುವಲ್ಲಿ ಬಯಲಾಟಗಳು ನಾಶವಾಗುತ್ತಿವೆ. ರಂಗ ಶಿಕ್ಷಣ ವ್ಯಾಪಕವಾಗಿ ಕರ್ನಾಟಕದಲ್ಲಿ ಬೆಳೆದಿದೆ. ಬಯಲಾಟ ದೊಡ್ಡ ಕಲಾ ಮಾಧ್ಯಮ. ಸ್ಥಳಿಯ ರಂಗಕಲೆ ಹಾಗೂ ಹಳ್ಳಿಗಳಲ್ಲಿ ವಿಭಿನ್ನ ಬದಲಾವಣೆಯಾಗಿರುವುದರಿಂದ ಬಯಲಾಟವನ್ನು ಉಳಿಸಬೇಕಿದೆ ಎಂದರು.
ಬುಡಕಟ್ಟು ಅಧ್ಯಯನ ವಿಭಾಗ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಎಂ.ಮೈತ್ರಿ ಮಾತನಾಡಿ, ಬಹಳಷ್ಟು ಹಳ್ಳಿಗಳಲ್ಲಿ ಬಯಲಾಟ ಕಲಾವಿದರಿದ್ದಾರೆ. ವೇಷಭೂಷಣ ಆಕರ್ಷಣೀಯವಾಗಿರುವುದರಿಂದ ಸಮುದಾಯದ ಮೇಲೆ ಪ್ರಭಾವ ಬೀರಲಿದೆ. ಹಬ್ಬಗಳು, ಕಲೆಗಳ ಹಿಂದೆ ಜ್ಞಾನ ವಿಜ್ಞಾನವಿದೆ. ಕಲೆಗಳ ಉಳಿವಿಗೆ ಸರ್ಕಾರ ಗಮನ ಕೊಡಬೇಕೆಂದು ವಿನಂತಿಸಿದರು.
ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದನ್ನೂ ಓದಿ: ಚಳ್ಳಕೆರೆ ರೈಲ್ವೆ ಸಮಸ್ಯೆ | ಅದಿರು ಸಾಗಾಟಕ್ಕೆ ಬ್ರೇಕ್ ಹಾಕಲು ಪತ್ರ | ಡಿಸಿ ಮಾಹಿತಿ
ಈ ಸಂದರ್ಭದಲ್ಲಿ ಎನ್.ಸಿ.ಸಿ. ಅಧಿಕಾರಿಗಳಾದ ಪ್ರೊ.ಮಂಜುನಾಥ, ಡಾ.ವಿ.ಪ್ರಸಾದ, ಡಾ.ಬಿ.ಕೆ.ಬಸವರಾಜು, ವ್ಯವಹಾರ ನಿರ್ವಹಣಾಶಾಸ್ತ್ರ ಮುಖ್ಯಸ್ಥರಾದ ಡಾ.ಮೇಘನಾ, ವಾಣಿಜ್ಯಶಾಸ್ತ್ರ ಮುಖ್ಯಸ್ಥರಾದ ಪ್ರೊ.ಜಮುನಾರಾಣಿ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
