
CHITRADURGA NEWS | 26 MAY 2026
ಚಿತ್ರದುರ್ಗ: ಬಹಳ ವರ್ಷಗಳ ಕಾಲ ಅಮೇರಿಕಾದಲ್ಲಿ ಸೇವೆ ಸಲ್ಲಿಸಿದ ಡಾ.ಕಂಠೀರವ ಬಾಲಸರಸ್ವತಿಯವರು ಭಾರತಕ್ಕೆ ಮರಳಿ ಅನೇಕ ಹೊಸ ಮೆಡಿಕಲ್ ಕಾಲೇಜುಗಳಲ್ಲಿ ಸೂಕ್ತ ಸಲಹೆ ಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆಂದು ರೆಡ್ಡಿ ಜನಸಂಘದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಸ್ಮರಿಸಿದರು.
ಇದನ್ನೂ ಓದಿ: ಆಡುಮಲ್ಲೇಶ್ವರದಲ್ಲಿ 9 ಮರಿಗಳನ್ನು ಹೆತ್ತ ಗುಳ್ಳೆನರಿ | ಕರಡಿ ಸೀನಮ್ಮ ಕೂಡಾ ಮತ್ತೊಂದು ಮರಿಗೆ ಜನ್ಮ
ಕಳೆದ 9 ರಂದು ನಿಧನರಾದ ಡಾ.ಕಂಠೀರವ ಬಾಲಸರಸ್ವತಿರವರಿಗೆ ಕುಟುಂಬ ವರ್ಗದವರು ತುರುವನೂರು ರಸ್ತೆಯಲ್ಲಿರುವ ರೆಡ್ಡಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ನನಗೂ ಅವರಿಗೂ ಅರವತ್ತು ವರ್ಷಗಳ ಪರಿಚಯವಿದೆ. ಹಿರಿಯೂರು ತಾಲ್ಲೂಕು ಕುಗ್ರಾಮ ಬಸಪ್ಪನಮಾಳಿಗೆಯಲ್ಲಿ ಜನಿಸಿದ ಡಾ.ಕಂಠೀರವ ಬಾಲಸರಸ್ವತಿರವರು ಮರಡಿಹಳ್ಳಿಯಲ್ಲಿ ಶಿಕ್ಷಣ ಪಡೆದು ನಂತರ ಬೇರೆ ಬೇರೆ ಕಡೆ ವಿದ್ಯಾಭ್ಯಾಸ ಮಾಡಿ ವೈದ್ಯರಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದರು. ರೆಡ್ಡಿ ಜನಸಂಘದ ಸದಸ್ಯರಾಗಿ ಅಮೂಲ್ಯವಾದ ಸಲಹೆಗಳನ್ನು ನೀಡುತ್ತಿದ್ದರು. ಅವರ ನಿಧನದಿಂದ ಸಂಘಕ್ಕೆ ಅಪಾರ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.
ಡಾ.ಕಂಠೀರವ ಬಾಲಸರಸ್ವತಿರವರ ಜೊತೆ ಸಾಕಷ್ಟು ಬಾರಿ ಚರ್ಚೆ ನಡೆಸಿದ್ದೇನೆ. ಅವರು ನೀಡಿದ ಸಲಹೆಗಳನ್ನು ಪಾಲಿಸುತ್ತೇವೆ. ಐಮಂಗಲ ಭಾಗದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ ಮೃತರು ಅನೇಕ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್ | 81.10 ಕೋಟಿ ಬೆಳೆ ವಿಮೆ ಪರಿಹಾರ ಬಿಡುಗಡೆ | ರೈತರ ಖಾತೆಗೆ ಜಮಾ
ಚರ್ಮ ತಜ್ಞ ಡಾ.ಆನಂದಪ್ಪ ಮಾತನಾಡಿ ಡಾ.ಕಂಠೀರವ ಬಾಲಸರಸ್ವತಿರವರು ವೈದ್ಯರಾಗಿ ಅಪಾರ ಸೇವೆ ಸಲ್ಲಿಸಿ ವೈದ್ಯಕೀಯ ಲೋಕದ ಬ್ರಹ್ಮ ಎನಿಸಿಕೊಂಡವರು. ಅವರೊಬ್ಬ ಕೇವಲ ವೈದ್ಯರಾಗಿರಲಿಲ್ಲ. ಶಕ್ತಿಯಾಗಿದ್ದರು. ವೃತ್ತಿ ಜೀವನದಲ್ಲಿ ಯಾರಿಗೂ ತೊಂದರೆ ಕೊಟ್ಟವರಲ್ಲ ಎಂದು ಗುಣಗಾನ ಮಾಡಿದರು.
ಬಸವೇಶ್ವರ ಆಸ್ಪತ್ರೆಯ ಡಾ.ರಾಜೇಶ್ ಇನ್ನು ಅನೇಕು ನುಡಿನಮನದಲ್ಲಿ ಮಾತನಾಡಿದರು. ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ರಘುರಾಮರೆಡ್ಡಿ, ಡಾ.ಕಂಠೀರವ ಬಾಲಸರಸ್ವತಿರವರ ಪತ್ನಿ, ಮಕ್ಕಳು, ಮೊಮ್ಮಕ್ಕಳು, ಅಳಿಯಂದಿರು, ಬಂಧು ಬಾಂಧವರು, ಅಪಾರ ವೈದ್ಯರುಗಳು, ರೆಡ್ಡಿ ಜನಸಂಘದ ನಿರ್ದೇಶಕರುಗಳಾದ ಆರ್.ವಿ.ಮಾರುತೇಶ್‍ರೆಡ್ಡಿ, ರಾಮಕೃಷ್ಣರೆಡ್ಡಿ ಹಾಗೂ ಪದಾಧಿಕಾರಿಗಳು ನುಡಿನಮನದಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

