
CHITRADURGA NEWS | 26 JUNE 2024
ಚಿತ್ರದುರ್ಗ: ಹಜ್ ಯಾತ್ರೆಗೆ ತೆರಳಿದ್ದ ಹಿರಿಯೂರಿನ ಮಹಿಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿದ್ದಾರೆ.
ಹಿರಿಯೂರು ನಗರದ ವೇದಾವತಿ ಬಡಾವಣೆಯ ಬೆಸ್ಕಾಂ ನಿವೃತ್ತ ನೌಕರ ರಫೀಕ್ ಅಹಮದ್ ಅವರ ಪತ್ನಿ ಷಾಕಿರಾ ಬಾನು (69) ಮೃತಪಟ್ಟವರು. ಪತಿಯೊಂದಿಗೆ ಮೇ 10ರಂದು ಹಜ್ ಯಾತ್ರೆಗೆ ತೆರಳಿದ್ದರು.
ಕ್ಲಿಕ್ ಮಾಡಿ ಓದಿ: ಮುಸ್ಲಿಂ ಮಹಿಳೆಗೆ ನ್ಯಾಯ ದೊರಕಿಸಿದ ಸದ್ಧರ್ಮ ನ್ಯಾಯಪೀಠ | ಸಿರಿಗೆರೆ ಸ್ವಾಮೀಜಿಗೆ ಗೌರವ
ಜೂನ್ 23ರ ರಾತ್ರಿ 12 ಗಂಟೆಯ ವಿಮಾನದಲ್ಲಿ ಅವರು ಬೆಂಗಳೂರಿಗೆ ಬರಬೇಕಿತ್ತು. ಆದರೆ ರಾತ್ರಿ 10 ಗಂಟೆ ಸಮಯದಲ್ಲಿ ವಿಮಾನ ನಿಲ್ದಾಣಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ಇದ್ದಕ್ಕಿದ್ದಂತೆ ಅನಾರೋಗ್ಯ ಉಂಟಾಗಿ ಷಾಕಿರಾ ಬಾನು ಮೃತಪಟ್ಟಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: 4.80 ಕೋಟಿ ವಂಚಿಸಿ ವಿಯೆಟ್ನಾಂ ಸೇರಿದ್ದ ಆರೋಪಿ ಅಂದರ್
ಮೃತರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ. ಸೋಮವಾರ ಮೆಕ್ಕಾದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಪತಿ ರಫೀಕ್ ಇನ್ನೂ ಮೆಕ್ಕಾದಲ್ಲಿ ಇದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
