
CHITRADURGA NEWS | 01 AUGUST 2025
ಚಿತ್ರದುರ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.
ವಿದ್ಯಾರ್ಥಿಗಳ ಆಧಾರ್ ಜೋಡಿಣೆಯಾಗಿರುವ ಬ್ಯಾಂಕ್ ಖಾತೆಗೆ ವಿದ್ಯಾರ್ಥಿವೇತನವನ್ನು ನೇರ ನಗದು ವರ್ಗಾವಣೆ ತಂತ್ರಾಂಶದ ಮೂಲಕ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಆಧಾರ್ ಸೀಡಿಂಗ್ ಆಗದೇ ಇರುವ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನ ಜಮೆ ಮಾಡುವಲ್ಲಿ ತಾಂತ್ರಿಕ ತೊಂದರೆ ಉಂಟಾಗುತ್ತದೆ.

ಇದನ್ನೂ ಓದಿ: ನಾಗಪುರ ದೀಕ್ಷಾ ಭೂಮಿ ಯಾತ್ರೆ | ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 09 ಕೊನೆ ದಿನ
ಈ ಹಿನ್ನಲೆಯಲ್ಲಿ ಆಗಸ್ಟ್ 25 ರಿಂದ ಸೆಪ್ಟಂಬರ್ 7ರವರೆಗೆ ವಿಶೇಷ ಆಧಾರ್ ಸೀಡಿಂಗ್ ಅಭಿಯಾನ ಆಯೋಜಿಸಲಾಗಿದ್ದು ವಿದ್ಯಾರ್ಥಿಗಳು ಭಾಗವಹಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡುವಂತೆ ಚಳ್ಳಕೆರೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
