CHITRADURGA NEWS | 17 NOVEMBER 2026
ಚಿತ್ರದುರ್ಗ: ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಸೇನಾ ತರಬೇತಿ ನೀಡಲು ರಾಜ್ಯ ಸರ್ಕಾರ ಕರೆದಿರುವ ಟೆಂಡರ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಇಲ್ಲವಾದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಹಿರಿಯೂರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | ನ.21 ರಂದು ಪ್ರಜಾಸೇವಾ ಆಂದೋಲನದಲ್ಲಿ ಭಾಗೀ..
ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದ ಆಧಾರದ ಮೇಲೆ ಪ್ರತ್ಯೇಕ ಸೇನಾ ತರಬೇತಿ ನೀಡಲು ಮುಂದಾಗಿರುವುದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. 60 ದಿನಗಳ ಸೇನಾ ತರಬೇತಿಯನ್ನು ಅಲ್ಪಸಂಖ್ಯಾತರಿಗೆ ಮಾತ್ರ ನೀಡುವ ನಿರ್ಧಾರ ಆಘಾತಕಾರಿಯಾಗಿದೆ. ತರಬೇತಿ ನೀಡುವುದಾದರೆ ಎಲ್ಲ ಧರ್ಮದವರಿಗೂ ಸಮಾನವಾಗಿ ನೀಡಬೇಕು. ಪ್ರತ್ಯೇಕವಾಗಿ ಒಂದು ಸಮುದಾಯಕ್ಕೆ ಮಾತ್ರ ಅವಕಾಶ ಕಲ್ಪಿಸುವುದೇಕೆ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020 ಅನ್ನು ಹಿಂಪಡೆಯಲು ಮುಂದಾಗಿದೆ ಎಂಬ ಮಾಹಿತಿ ಬಂದಿದೆ. ಕಾಯ್ದೆಯನ್ನು ಹಿಂಪಡೆಯುವುದರಿಂದ ಗೋವುಗಳ ಕಳ್ಳಸಾಗಣೆ ಮತ್ತು ಅಕ್ರಮ ಹತ್ಯೆಗೆ ಅವಕಾಶ ನೀಡಿದಂತಾಗುತ್ತದೆ. ಆದ್ದರಿಂದ ಕಾಯ್ದೆಯನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ದುರ್ಬಲಗೊಳಿಸಬಾರದು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮತಾಂತರ ಚಟುವಟಿಕೆಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಅಲ್ಪಸಂಖ್ಯಾತರಿಗೆ ಮಾತ್ರ ಪ್ರತ್ಯೇಕ ಸೇನಾ ತರಬೇತಿ ನೀಡುವ ಬದಲು ಎಲ್ಲ ಸಮುದಾಯದವರಿಗೂ ಸಮಾನ ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಸಂವಿಧಾನದ 14 ಮತ್ತು 15ನೇ ವಿಧಿಗಳ ಆಶಯಗಳಿಗೆ ಧಕ್ಕೆಯಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಎಚ್.ಡಿ.ಪುರ ದೇವಾಲಯದ ಬಳಿ ಪಾಳೇಗಾರರ ಕಾಲದ ಶಾಸನ ಪತ್ತೆ
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಿ. ಷಡಾಕ್ಷರಪ್ಪ, ಜಿಲ್ಲಾ ಕಾರ್ಯದರ್ಶಿ ಎನ್. ಚನ್ನಕೇಶವ, ಗ್ರಾಮಾಂತರ ಕಾರ್ಯದರ್ಶಿ ಹೆಚ್. ಶ್ರೀನಿವಾಸ್ ಹಾಗೂ ನಗರ ಸಹ ಕಾರ್ಯದರ್ಶಿ ರಾಘವೇಂದ್ರ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

