
CHITRADURGA NEWS | 01 APRIL 2026
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದಲ್ಲಿ ನೆಲೆಸಿರುವ ಪುರಾಣ ಪ್ರಸಿದ್ಧ ಶ್ರೀ ರಂಗನಾಥಸ್ವಾಮಿ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವವು ಏಪ್ರಿಲ್ 3ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಲಿದೆ.
ಇದನ್ನೂ ಓದಿ: KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು
ಸ್ವಸ್ತಿಶ್ರೀ ಪರಾಭವನಾಮ ಸಂವತ್ಸರದ ಚೈತ್ರ ಶುದ್ಧ ತದಿಗೆಯ ಶುಭ ಸಂದರ್ಭದಲ್ಲಿ, ಮಾರ್ಚ್ 21ರಿಂದ ಏಪ್ರಿಲ್ 7ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ. ಈಗಾಗಲೇ ಮಾ. 21ರಂದು ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಗಿದೆ. ಮಾ. 31ರಂದು ಅಂಕುರಾರ್ಪಣ, ಕಳಸ ಸ್ಥಾಪನೆ ಹಾಗೂ ಹೋಮಾದಿ ಕಾರ್ಯಕ್ರಮಗಳು ನಡೆಯದಿವೆ. ಏಪ್ರಿಲ್ 1ರಂದು ರಾತ್ರಿ ಗರುಡೋತ್ಸವ ಹಾಗೂ ಕಲ್ಯಾಣೋತ್ಸವ ಸೇವೆಗಳು ಜರುಗಲಿವೆ.
ಜಾತ್ರಾ ಮಹೋತ್ಸವದ ಪ್ರಮುಖ ಆಕರ್ಷಣೆ:
ಉತ್ಸವದ ಪ್ರಮುಖ ಘಟ್ಟವಾದ ಬ್ರಹ್ಮರಥೋತ್ಸವವು ಏಪ್ರಿಲ್ 3ರಂದು ಮಧ್ಯಾಹ್ನ 12:00 ಗಂಟೆಯ ಶುಭ ಲಗ್ನದಲ್ಲಿ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ವತಿಯಿಂದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಏ. 7ರ ಮಂಗಳವಾರ ಸಂಜೆ ಶ್ರೀ ಕಣಿವೆಮಾರಮ್ಮ ದೇವಿಗೆ ಸುಮಂಗಲೆಯರಿಂದ ಅಕ್ಕಿ ತಂಬಿಟ್ಟಿನ ಆರತಿ ಸೇವೆ ನಡೆಯುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.
ಜಾತ್ರಾ ಪ್ರಯುಕ್ತ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಅಭಿವೃದ್ಧಿ ಸಮಿತಿ ಹಾಗೂ ಅಬ್ಬಿನಹೊಳೆ ಮತ್ತು ಕಂಬತ್ತನಹಳ್ಳಿ ಗ್ರಾಮಸ್ಥರು ಕಾರ್ಯಕ್ರಮದ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಉಪಚುನಾವಣೆ ಬಳಿಕ ಒಳಮೀಸಲಾತಿ ಗೊಂದಲ ನಿವಾರಣೆ | ಕೆ.ಎಚ್.ಮುನಿಯಪ್ಪ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಮಂಡಳಿಯು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗಳಾದ 9980607889, 8762219413, 9448372586ಕರೆ ಮಾಡಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

