
ಚಿತ್ರದುರ್ಗ ನ್ಯೂಸ್.ಕಾಂ: ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ರೆಬೆಲ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಭಾಗವಹಿಸುತ್ತಿದ್ದಾರೆ.
ಈ ವಿಷಯವನ್ನು ಸ್ವತಃ ಅಭಿಷೇಕ್ ವಿಡಿಯೋ ಮೂಲಕ ಹೇಳಿದ್ದು, 8ನೇ ತಾರೀಖು ಚಿತ್ರದುರ್ಗದಲ್ಲಿ ನಡೆಯುತ್ತಿರುವ ಗಣೇಶೋತ್ಸವದಲ್ಲಿ ನಾನು ಭಾಗವಹಿಸುತ್ತಿದ್ದೇನೆ. ನಿಮ್ಮನ್ನೆಲ್ಲಾ ನೋಡಲು ಕಾಯುತ್ತಿರುತ್ತೇನೆ. ಚಿತ್ರದುರ್ಗದಲ್ಲಿ ಸಿಗೋಣ ಎಂದು ಅಭಿಷೇಕ್ ಹೇಳಿದ್ದಾರೆ.
ಗಣೇಶೋತ್ಸವಕ್ಕೆ ಅಭಿಷೇಕ್ ಅಂಬರೀಶ್ ಅವರನ್ನು ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಆಹ್ವಾನಿಸಿದ್ದಾರೆ ಎಂದು ಅಭಿಷೇಕ್ ವೀಡಯೋದಲ್ಲಿ ತಿಳಿಸಿದ್ದಾರೆ.
ವರ್ಷದಿಂದ ವರ್ಷಕ್ಕೆ ರಂಗೇರುತ್ತಿರುವ ಹಿಂದೂ ಮಹಾಗಣಪತಿಗೆ ಈ ವರ್ಷ ಅಭಿಷೇಕ್ ಅಂಬರೀಶ್ ಬಂದು ಭಾಗವಹಿಸುತ್ತಿರುವುದು ವಿಶೇಷವಾಗಿದೆ.
ಕೆಲ ದಿನಗಳ ಹಿಂದೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಸಂದರ್ಭದಲ್ಲೂ ಅಭಿಷೇಕ್ ಹಿಂದೂ ಮಹಾಗಣಪತಿ ಮಂಟಪಕ್ಕೆ ಭೇಟಿ ನೀಡಿ ನಾಡಿನ ರೈತರ ಪರವಾಗಿ ಪ್ರಾರ್ಥನ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

