ಮುಖ್ಯ ಸುದ್ದಿ
ಖಾಯಾಂ ಉಪನ್ಯಾಸಕರ ನೇಮಕಾತಿಗೆ ABVP ಆಗ್ರಹ
CHITRADURGA NEWS | 04 OCTOBER 2024
ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕ್ಲಿಕ್ ಮಾಡಿ ಓದಿ: Navodaya School; ನವೋದಯ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅ.07 ಕೊನೆ ದಿನ
ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಮರ್ಪಕ ಬೋಧಕ ವರ್ಗವಿಲ್ಲದೆ ವಿದ್ಯಾರ್ಥಿಗಳ ಪಾಲಿಗೆ ಮೌಲ್ಯಯುತ ಶಿಕ್ಷಣವೆಂಬುದು ಮಸುಕಾಗಿದೆ.
ರಾಜ್ಯದಲ್ಲಿನ 460ಕ್ಕೂ ಹೆಚ್ಚಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ ವ್ಯಾಪಕ ಕೊರತೆ ಇರುವುದು, ಇದರ ಪರಿಣಾಮ ವಿದ್ಯಾರ್ಥಿಗಳಿಗೆ ಸಮರ್ಪಕ ತರಗತಿ ನಡೆಯದಿರುವುದು ಕಳೆದ ಹಲವಾರು ವರ್ಷಗಳಿಂದ ಇರುವ ಗಂಭೀರ ಸಮಸ್ಯೆಯಾಗಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಖಾಯಂ ಉಪನ್ಯಾಸಕರ ಬದಲು ಸರ್ಕಾರ ಪ್ರತಿ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿ ಸಮಾಧಾನ ಪಟ್ಟಿಕೊಳ್ಳುತ್ತಿತ್ತು. ಆದರೆ ಅತಿಥಿ ಉಪನ್ಯಾಸಕರ ನೇಮಕದಲ್ಲಿಯೂ ಕೂಡ ವಿಳಂಬ ನೀತಿ ಅನುಸರಿಸುವುದು ನಡೆದು ಬಂದಂತಹ ಪ್ರತಿತಿಯಂತೆ ಇತ್ತೀಚೆಗೆ ನೇಮಕಾತಿ ಆದೇಶ ಹೊರ ಬಿದ್ದಿದೆ.
ಕ್ಲಿಕ್ ಮಾಡಿ ಓದಿ: Vani vilasa Sagar: ಮತ್ತಷ್ಟು ಹೆಚ್ಚಾಯಿತು ವಾಣಿ ವಿಲಾಸ ಒಳಹರಿವು | ಇಂದಿನ ಜಲಾಶಯದ ನೀರಿನ ಮಟ್ಟ ಎಷ್ಟಿದೆ ?
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿಯೂ ಕೂಡ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ತರಗತಿಗಳು ಶುರುವಾಗಿ 50 ದಿನಗಳು ಕಳೆದ ನಂತರ ನೇಮಕಾತಿ ಮಾಡಿರುವುದು ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಂತಿದೆ. ರಾಜ್ಯದ ವಿದ್ಯಾರ್ಥಿಗಳ ಸಮಯ ಹಾಗೂ ತರಗತಿಗಳ ನಷ್ಟಕ್ಕೆ ಹೊಣೆಯಾರು?
ಆದ್ದರಿಂದ ಸರ್ಕಾರ ಖಾಯಂ ಉಪನ್ಯಾಸಕರ ನೇಮಕಾತಿಗೆ ಆದ್ಯತೆ ನೀಡಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಭಾಗ ಸಹ ಸಂಚಾಲಕ ಗೋಪಿ, ವಿಭಾಗ ಸಹ ಸಂಚಾಲಕ ಗೋಪಿ, ಚಿತ್ರಶ್ವಾಮಿ, ನಗರ ಸಹ ಕಾರ್ಯದರ್ಶಿ ಸಂಜಯ್, ಪ್ರವೀಣ್, ರವಿ, ಕಾರ್ತಿಕ್ , ಚಂದನ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ಕ್ಲಿಕ್ ಮಾಡಿ ಓದಿ: Land Document: ಜಮೀನಿನ ಮೂಲ ದಾಖಲೆ ಹಿಂದಿರುಗಿಸದ ಬ್ಯಾಂಕಿಗೆ 2.10 ಲಕ್ಷ ದಂಡ