CHITRADURGA NEWS | 14 FEBRUARY 2026
ಚಿತ್ರದುರ್ಗ: ನಗರದ ಸರ್ಕಾರಿ ಬಾಲಕ ಪದವಿ ಪೂರ್ವ ಕಾಲೇಜಿಗೆ ಸೇರಿದ ಭೂಮಿಯನ್ನು ನಗರಸಭೆಯು ಅತಿಕ್ರಮಿಸಿಕೊಂಡು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿರುವುದನ್ನು ಖಂಡಿಸಿ ಹಾಗೂ ಅಲ್ಲಿ ನಡೆಯುತ್ತಿರುವ ಮಾದಕ ವಸ್ತುಗಳ ಮಾರಾಟ ಮಳಿಗೆಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ABVP) ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | 13 ಫೆಬ್ರವರಿ | ಯಾವ ಅಡಿಕೆಗೆ, ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್ ?
ಕಾಲೇಜು ಆವರಣದಲ್ಲಿ ನಿಯಮಬಾಹಿರವಾಗಿ ನಿರ್ಮಿಸಲಾಗಿರುವ ಈ ಶೆಡ್‌ಗಳಿಂದಾಗಿ ಶೈಕ್ಷಣಿಕ ವಾತಾವರಣ ಹದಗೆಡುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕಾಲೇಜು ಆವರಣದ ಸಮೀಪವೇ ಮಾದಕ ವಸ್ತುಗಳ ಮಾರಾಟ ಮಳಿಗೆಗಳಿರುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಒಳಚರಂಡಿ ವ್ಯವಸ್ಥೆಯ ಮೇಲೆ ನೇರವಾಗಿ ಈ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಇದು ಮಳೆ ನೀರು ಹರಿದು ಹೋಗಲು ಅಡ್ಡಿಯುಂಟುಮಾಡುತ್ತಿದೆ ಮತ್ತು ಸಂಪೂರ್ಣ ಒಳಚರಂಡಿ ವ್ಯವಸ್ಥೆಯನ್ನು ರಾಜಿ ಮಾಡಿಕೊಂಡಂತಾಗಿದೆ.
ಈ ಅಕ್ರಮ ಶೆಡ್‌ಗಳ ನಿರ್ಮಾಣದ ಸಮಯದಲ್ಲಿ ಕಾಲೇಜಿನ ಮೂಲಸೌಕರ್ಯ ಹಾಗೂ ಕಟ್ಟಡಗಳಿಗೆ ಹಾನಿ ಮಾಡಲಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.
ಶೈಕ್ಷಣಿಕ ಕೇಂದ್ರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದು ಖಂಡನೀಯ. ಕೂಡಲೇ ಈ ಅಕ್ರಮ ಮಳಿಗೆಗಳನ್ನು ತೆರವುಗೊಳಿಸಿ, ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು.
ಇದನ್ನೂ ಓದಿ: ನೀರಿಗಾಗಿ ಸಾವಿರಾರು ರೈತರ ಪಾದಯಾತ್ರೆ | ಸರ್ಕಾರದ ವಿರುದ್ಧ ಆಕ್ರೋಶ | ವಿಧಾನಸೌಧ ಮುತ್ತಿಗೆ ಎಚ್ಚರಿಕೆ
ಒಂದು ವೇಳೆ ಆಡಳಿತ ಮಂಡಳಿ ಮತ್ತು ನಗರಸಭೆ ಈ ಕೂಡಲೇ ಕ್ರಮ ಕೈಗೊಳ್ಳದಿದ್ದರೆ, ABVP ವತಿಯಿಂದ ಜಿಲ್ಲಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ವಿದ್ಯಾರ್ಥಿ ಮುಖಂಡರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಗೋಪಿ, ಜಿಲ್ಲಾ ಸಂಚಾಲಕ ಸಂಜಯ್, ಪ್ರಮುಖ ಮುಖಂಡರಾದ ಕನಕರಾಜ್ ಕೋಡಿಹಳ್ಳಿ, ನಿಹಾರಿಕಾ, ಮಧು, ಕುಬೇರ, ಚರಣ್, ಸುದೀಪ್ ದೊಡ್ಡಚೆಲ್ಲೂರು, ಪ್ರಶಾಂತ್, ಜೀವನ್, ತರುಣ್, ಪ್ರವೀಣ್, ಅಮಿತ್, ಗುರು ಮತ್ತಿತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
