CHITRADURGA NEWS | 05 APRIL 2026
ಚಿತ್ರದುರ್ಗ: ಮಲ್ಲಾಡಿಹಳ್ಳಿ ಆಯುರ್ವೇದ ಕಾಲೇಜು ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
ಲಿಖಿತಾ ಬಿಎಎಂಎಸ್ ಮುಗಿಸಿ ತರಬೇತಿ(ಇಂಟರ್ನ್‌ಶಿಪ್) ಮಾಡುತ್ತಿದ್ದಾಗ ಪ್ರಾಧ್ಯಾಪಕರ ಜೊತೆಗೆ ಆಕೆಯ ಹೆಸರು ತಳುಕು ಹಾಕಿ ಅಪಪ್ರಚಾರ ಮಾಡಲಾಗಿದೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಮಾಜದಲ್ಲಿ ವ್ಯಕ್ತಿಯ ಚಾರಿತ್ರ್ಯ ಹರಣ ಮಾಡುವುದು ಎಂತಹ ಭೀಕರ ಪರಿಣಾಮ ಬೀರಬಲ್ಲದು ಎಂಬುದಕ್ಕೆ ಈ ಘಟನೆ ಕನ್ನಡಿಯಾಗಿದೆ. ಮುಂದೆ ಜಿಲ್ಲೆಯಲ್ಲಿ ಈ ರೀತಿ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಜಿಲ್ಲಾಡಳಿತ ಕಾನೂನು ರೀತಿಯಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮನವಿ ಮಾಡಿಕೊಂಡರು.
ಇದನ್ನೂ ಓದಿ: ಅಡಿಕೆ ಧಾರಣೆ | 4 ಏಪ್ರಿಲ್ | ಇಂದಿನ ಅಡಿಕೆ ರೇಟ್
ಈ ವೇಳೆ ಎಬಿವಿಪಿ ಜಿಲ್ಲಾ ಸಂಚಾಲಕ ಸಂಜಯ್, ರಾಜ್ಯ ಕಾರ್ಯಕಾರಿಣಿ ಸದಸ್ಯೆ ನಿಹಾರಿಕ, ನಗರ ಸಹ ಕಾರ್ಯದರ್ಶಿ ರಾಘವೇಂದ್ರ, ಕನಕರಾಜ್ ಕೋಡಿಹಳ್ಳಿ, ಮೇಘನ, ಅಕ್ಷತ, ರಾಜೇಶ್ ಕುಮಾರ್, ಜಯರಾಜ್, ಜಯಂತ್, ಮಲ್ಲಿಕಾರ್ಜುನ್ ಇನ್ನಿತರರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
