CHITRADURGA NEWS | 17 JUNE 2025
ಹಿರಿಯೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಿರಿಯೂರು ಶಾಖೆಯಿಂದ ತಾಲೂಕು ಸಮ್ಮೇಳನ ನಡೆಯಿತು.

Also Read: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಎಬಿವಿಪಿ ಕರ್ನಾಟಕ ದಕ್ಚಿಣ ಪ್ರಾಂತ ಉಪಾಧ್ಯಕ್ಷ ಡಾ.ಸ.ರಾ.ಲೇಪಾಕ್ಷ ಸಮ್ಮೇಳನ ಉದ್ದೇಶಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ರಾಷ್ಟ್ರೀಯ ಮನೋಭಾವ ಬೆಳಸಿಕೊಳ್ಳಬೇಕು. ದೇಶ ನನ್ನದು ಎಂಬ ಭಾವನೆಯೇ ಅಭಿವೃದ್ಧಿಯ ಸಂಕೇತ ಎಂದರು.
ಮೊಬೈಲ್ ಗೀಳು ಬಿಟ್ಟು ಪುಸ್ತಕದ ಕಡೆ ಮುಖ ಮಾಡಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಪರಿಪೂರ್ಣ ಆಗಲು ಸಾಧ್ಯ. ದೇಶದ ನಿರ್ಮಾಣ ಯುವ ಶಕ್ತಿ ಕೈಯಲ್ಲಿ ಇರುವುದರಿಂದ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ವಾಣಿ ಕಾಲೇಜಿನ ಪ್ರಾಧ್ಯಾಪಕ ರಂಗಸ್ವಾಮಿ ಅವರನ್ನು ಹಿರಿಯೂರು ನಗರ ಅಧ್ಯಕ್ಷರನ್ನಾಗಿ, ಉಪಾಧ್ಯಕ್ಷರಾಗಿ ಚೇತನ್ ಹಾಗೂ ನಗರ ಕಾರ್ಯದರ್ಶಿಯಾಗಿ ವೀರೇಶ್ ಅವರನ್ನು ಆಯ್ಕೆ ಮಾಡಲಾಯಿತು.
Also Read: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಹರೀಶ್, ಸುರೇಶ್, ಎಬಿವಿಪಿ ಜಿಲ್ಲಾ ಸಂಚಾಲಕ ಕನಕರಾಜ್ ಕೋಡಿಹಳ್ಳಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಸಂಜಯ್, ಚೇತನ್, ರಂಗನಾಥ್, ರಾಕೇಶ್, ಹಿರಿಯ ಕಾರ್ಯಕರ್ತರಾದ ಧನುಷ್, ದಯಾನಂದ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
