Connect with us

ABVP protest: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ

abvp protest

ಮುಖ್ಯ ಸುದ್ದಿ

ABVP protest: ಕಠಿಣ ಶಿಕ್ಷೆಯ ಕಾನೂನು ಜಾರಿಗೊಳಿಸಿ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆಗ್ರಹ

CHITRADURGA NEWS | 19 AUGUST 2024
ಚಿತ್ರದುರ್ಗ: ಕೋಲ್ಕತ್ತದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಜಿಲ್ಲಾ ಘಟಕ ಸೋಮವಾರ ಪ್ರತಿಭಟನೆ ನಡೆಸಿತು.

ವೈದ್ಯರು ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಯಾವುದೇ ಮಹಿಳೆಯರು ಭಯಮುಕ್ತ ವಾತಾವರಣದಲ್ಲಿ ಕೆಲಸ ನಿರ್ವಹಿಸುವಂತಾಗಬೇಕು. ಕೋಲ್ಕತ್ತದಲ್ಲಿ ಕೃತ್ಯ ಎಸಗಿರುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಆಗ್ರಹಿಸಿದರು.

ದೇಶದ ಬೇರೆ ಬೇರೆ ಭಾಗಗಳಿಂದ ದೂರದ ನಗರಗಳಿಗೆ ಹೋಗಿ ಕಷ್ಟಪಟ್ಟು ಓದಿ ವೈದ್ಯರಾಗಿ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುವ ಉದ್ದೇಶ ಹೊಂದಿರುವವರ ಮೇಲೆ ನಿರಂತರವಾಗಿ ಹಲ್ಲೆ, ದೌರ್ಜನ್ಯಗಳು ನಡೆಯುತ್ತಿರುವುದು ಖಂಡನೀಯ. ಕಠಿಣ ಶಿಕ್ಷೆ ನೀಡುವ ಕಾನೂನು ಜಾರಿ ಮಾಡುವ ಮೂಲಕ ಅಮಾನುಷ ಕೃತ್ಯ ಎಸಗುವ ದುಷ್ಟರಿಗೆ ಎಚ್ಚರಿಕೆ ನೀಡಬೇಕು. ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗೆ ಸರ್ಕಾರ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಕ್ಲಿಕ್ ಮಾಡಿ ಓದಿ: ಅನುಭವ ಮಂಟಪ ಜಗತ್ತಿಗೆ ಆದರ್ಶ | ಡಾ.ಬಸವಪ್ರಭು ಸ್ವಾಮೀಜಿ

ಕಳೆದ ಹಲವು ತಿಂಗಳುಗಳಿಂದ ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದ ಘಟನೆಗಳು ನಡೆಯುತ್ತಿವೆ. ಪಶ್ಚಿಮ ಬಂಗಾಳದ ಮಮತಾ ಸರ್ಕಾರವು ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಗರ ಕಾರ್ಯದರ್ಶಿ ಗೋಪಿ, ರಾಜ್ಯ ಕಾರ್ಯಕಾರಿಣಿ ಕನಕರಾಜ್‌ ಕೋಡಿಹಳ್ಳಿ, ಚಿತ್ರಸ್ವಾಮಿ, ಮಹಿಳಾ ಪ್ರಮುಖರಾದ ಚಂದನ, ಕಾರ್ಯಕರ್ತರಾದ ಸುದೀಪ್‌, ಚರಣ್‌, ಸಂಜು, ಜೀವನ್‌, ಮಿಥುನ್‌, ಆದರ್ಶ ಭಾಗವಹಿಸಿದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version