
CHITRADURGA NEWS | 20 AUGUST 2025
ಚಿತ್ರದುರ್ಗ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಅಮಾನುಷವಾಗಿ ಸುಟ್ಟು ಕೊಲೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಬಯಲು ಸೀಮೆಗೆ ಗೋಡಂಬಿ ಸೂಕ್ತ | ಕಡಿಮೆ ನೀರು, ನಿರ್ವಹಣೆ ವರದಾನ

ಆಗಸ್ಟ್ 19ರ ಮಧ್ಯಾಹ್ನ ಚಿತ್ರದುರ್ಗ ನಗರದ ಹೊರವಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳ ಸುಟ್ಟು, ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುವುದು ಆತಂಕಕಾರಿ ಸಂಗತಿ.
ಚಿತ್ರದುರ್ಗದ ಈ ಘಟನೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಿನ ಅನ್ವಯ ಸೂಕ್ತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು.
ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರ ಮತ್ತು ಕಾಲೇಜು ಕ್ಯಾಂಪಸ್‍ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರ ಹಿತವನ್ನು ಕಾಯಲು ಸಮರ್ಪಕ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಮತ್ತು ಅವುಗಳನ್ನು ಖಚಿತಪಡಿಸುವಕೊಳ್ಳುವ ಕುರಿತು ಗಂಭೀರವಾದ ಚಿಂತನೆ ನಡೆಸಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 20| ಮೆಕ್ಕೆಜೋಳ ರೇಟ್ ಎಷ್ಟಿದೆ?
ರಾಜ್ಯ ಕಾರ್ಯಕಾರಿಣಿ ಸದಸ್ಯ ಹೆಚ್.ಕೆ.ಪ್ರವೀಣ್, ವಿಭಾಗ ಸಂಚಾಲಕ ಗೋಪಿ, ಜಿಲ್ಲಾ ಸಂಚಾಲಕ ಸಂಜಯ್, ಸಾಮಾಜಿಕ ಜಾಲತಾಣ ಆದರ್ಶ, ಚರಣ್, ಕಾರ್ಯಕರ್ತರು ಜೀವನ್, ಮಂಜ, ಸುದರ್ಶನ, ಯಶ್ವಂತ್, ಪ್ರಶಾಂತ್, ಹರೀಶ್, ಹರೀಶಕುಮಾರ್, ಮನೋಜ್, ಕುಬೇರ್, ಪ್ರೀತಂ, ತರುಣ್‍ಕುಮಾರ್, ರಘು, ಸೂರ್ಯ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
