
ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ತಾಲೂಕಿನ ಬಿ.ದುರ್ಗ ಬಳಿ ಖಾಸಗಿ ಬಸ್ ಹಾಗೂ ಬೊಲೆರೋ ವಾಹನದ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ನಿವಾಸಿ ಈರಣ್ಣ ಮೃತ ವ್ಯಕ್ತಿ. ತೆಂಗಿನಕಾಯಿ ವ್ಯಾಪಾರ ಮುಗಿಸಿಕೊಂಡು ವಾಪಾಸಾಗುವಾಗ ಅಪಘಾತ ನಡೆದಿದೆ.
ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಧರ್ಮೇಂದ್ರ ಕುಮಾರ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಭೇಟಿ ನೀರಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
