
CHITRADURGA NEWS | 28 SEPTEMBER 2025
ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಐಮಂಗಲ ಉಪಾಧ್ಯ ಹೋಟೆಲ್ ಬಳಿ ಕೆ.ಎಸ್.ಆರ್.ಟಿ.ಸಿ. ಬಸ್ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ.
ಇದನ್ನೂ ಓದಿ: ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಹೆಚ್.ಜಿ. ಮಂಜಪ್ಪ ಸೆ.29 ರಂದು ಪದಗ್ರಹಣ

ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನ ಹಿರಿಯೂರು ಹಾಗೂ ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀಳಗಿಯಿಂದ ಬೆಂಗಳೂರಿಗೆ ಹೊರಟಿದ್ದ ಸರ್ಕಾರಿ ಬಸ್ ಐಮಂಗಲದ ಉಪಾಧ್ಯ ಹೋಟೆಲ್ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಇದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸುನಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿದಂತೆ 45 ಜನರಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಸಂಸದರಿಂದ ಗಾಯಾಳುಗಳ ಭೇಟಿ:
ಸಂಸದರಾದ ಗೋವಿಂದ ಕಾರಜೋಳ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮುಖಂಡರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು.
ಜಿಲ್ಲಾ ಆಸ್ಪತ್ರೆಯ ವೈದ್ಯರುಗಳಿಗೆ ಗಾಯಾಳುಗಳನ್ನು ಸರಿಯಾದ ರೀತಿಯಲ್ಲಿ ನೋಡಿಕೊಳ್ಳಿ ಉತ್ತಮವಾದ ಚಿಕಿತ್ಸೆ ನೀಡಿ, ಉತ್ತಮವಾದ ಔಷಧಿ ಕೋಡಿ ಎಂದುಸಂಸದರು ಸೂಚನೆ ನೀಡಿದರು.
ಇದನ್ನೂ ಓದಿ: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಬಿಜೆಪಿ ಖಂಜಾಚಿ ಮಾಧುರಿ ಗೀರಿಶ್, ಮುಖಂಡ ಡಾ.ಸಿದ್ದಾರ್ಥ ಗುಡಾರ್ಪಿ, ಮಾಜಿ ಅಧ್ಯಕ್ಷ ಎ.ಮುರಳಿ, ನಗರಸಭಾ ಸದಸ್ಯರಾದ ಸುರೇಶ್, ಶ್ರೀನಿವಾಸ್, ಮಾಜಿ ಸದಸ್ಯ ರವಿಶಂಕರ್, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ಕೆ.ನಾಗರಾಜ್ ಉಪ್ಪೇರಿಗೆನಹಳ್ಳಿ, ಜಿಲ್ಲಾ ವಕ್ತಾರ ನಾಗರಾಜ್ ಬೇಂದ್ರೆ, ಛಲವಾದಿ ತಿಪ್ಪೇಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
