CHITRADURGA NEWS | 16 MARCH 2024
ಚಿತ್ರದುರ್ಗ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ 2021ರ ಆಗಸ್ಟ್ 26 ರಿಂದ ನೋಂದಾಯಿಸಲಾಗುತ್ತಿದ್ದು, 2022ರ ಮಾರ್ಚ್ 31 ರವರೆಗೆ ನೋಂದಣಿಯಾಗಿ ಮತ್ತು ಈ ದಿನಾಂಕದೊಳಗೆ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ರೂ.2 ಲಕ್ಷಗಳ ಅಪಘಾತ ಪರಿಹಾರ ಒದಗಿಸಲಾಗುವುದು. ಈ ಸಂಬಂಧ ಅಸಂಘಟಿತ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಯಲು ಏಕರೂಪ ದರ ನಿಗದಿ
ಅಪಘಾತದಿಂದ ಮರಣ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆ: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್ಐಆರ್/ಪಂಚನಾಮ, In case claimant is minor, Guardian should produce certificate of guardianship issued by District Court while filling the claim.
ಇದನ್ನೂ ಓದಿ: ತಾವರೆ ಹೂವು ಮುಡಿದು ಸಂಸತ್ ಪ್ರವೇಶಿಸುತ್ತೇನೆ
ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆ: ಫಲಾನುಭವಿಯ ಆಧಾರ್ ಸಂಖ್ಯೆ, UAN ಕಾರ್ಡ್ (ಇ-ಶ್ರಮ್ ಕಾರ್ಡ್) ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಡಿಸ್ಚಾರ್ಜ್ ಸಾರಾಂಶವನ್ನು ಒಳಗೊಂಡಿರುವ ಆಸ್ಪತ್ರೆಯ ದಾಖಲೆ, Disability certificate issued by the authorised personnel of State/UT Govt.or Unique Disability Identity Card (permanent) issued by Department of Empowerment of Persons with Disabilities, M/O Social Justice & Empowerment, Govt. of India.
ಇದನ್ನೂ ಓದಿ: ಮಾದಾರ ಚನ್ನಯ್ಯ ಗುರುಪೀಠಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಿ.ಸಿ. ಪಾಟೀಲ್ ಭೇಟಿ
ಸೂಕ್ತ ದಾಖಲೆಯೊಂದಿಗೆ ಕಾರ್ಮಿಕ ಅಧಿಕಾರಿಗಳ ಕಛೇರಿ, ಜೆ.ಸಿ.ಆರ್ ಬಡಾವಣೆ, ಎಸ್.ಬಿ.ಐ ಬ್ಯಾಂಕ್ ಹತ್ತಿರ, 1ನೇ ಮಹಡಿ, ಚಿತ್ರದುರ್ಗ ಇಲ್ಲಿಗೆ ಮಾರ್ಚ್ 25ರೊಳಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

