
CHITRADURGA NEWS | 29 SEPTEMBER 2024
ಚಿತ್ರದುರ್ಗ: ಬೈಕ್, ಸ್ಕೂಟಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಹಿರಿಯೂರು ಸಮೀಪದ 103 ಕ್ರಾಸ್ ಬಳಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅತೀ ವೇಗವಾಗಿ ಬಂದ ಬಸ್ ಸ್ಕೂಟಿ ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ. 60 ವರ್ಷದ ಆಲೂರು ನಿವಾಸಿ ಬೈಕ್ ಸವಾರ ಭೂತಣ್ಣ ಮೃತಪಟ್ಟಿದ್ದು, ಸ್ಕೂಟಿಯಲ್ಲಿದ್ದ ಹೇಮದಳ ಮೂಲದ ಅನ್ನಪೂರ್ಣಮ್ಮ ಹಾಗೂ ಓಂಕಾರಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಹೊತ್ತಿ ಉರಿದ ಕಂಟೈನರ್ | ಜನವಸತಿ ಪ್ರದೇಶದ ಬಳಿ ತಪ್ಪಿದ ಅನಾಹುತ
ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅತಿವೇಗ ಹಾಗೂ ಅಜಾಗರೂಕತೆ ಘಟನೆ ಕಾರಣ ಎನ್ನಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

