
ಚಿತ್ರದುರ್ಗ ನ್ಯೂಸ್.ಕಾಂ: ತಾಲೂಕಿನ ಮೇಗಳಹಳ್ಳಿ ಬಳಿಯ ಜಾನ್‍ಮೈನ್ಸ್‍ನಲ್ಲಿ ಹಿಟಾಚಿ ಕೆಲಸ ಮಾಡುತ್ತಿದ್ದ ಗಣಿ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಸಂಬಂಧಿಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಲೋಕಸಭಾ ಚುನಾವಣಾ ಅಖಾಡಕ್ಕೆ ಕಾಂಗ್ರೆಸ್: ಮೈಸೂರು ನಾಯಕನ ಹೆಗಲಿಗೆ ಚಿತ್ರದುರ್ಗ ಅಭ್ಯರ್ಥಿ ಆಯ್ಕೆ ಹೊಣೆ

ದೊಡ್ಡಾಲಘಟ್ಟ ಗ್ರಾಮದ ತಿಮ್ಮೇಶ್(30) ಮೃತ ವ್ಯಕ್ತಿಯಾಗಿದ್ದು, ಸುರಕ್ಷತಾ ಸಾಧನಗಳಿಲ್ಲದೆ ಕೆಲಸ ಮಾಡಿದ್ದರಿಂದ ಮೃತಪಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಕಳೆದ 15 ವರ್ಷಗಳಿಂದ ಮೈನಿಂಗ್ ಕಂಪನಿಯಲ್ಲಿ ಹಿಟಾಚಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ಶನಿವಾರ ಮಧ್ಯಾಹ್ನ ಹಿಟಾಚಿ ಕೆಲಸ ನಿರ್ವಹಿಸುವಾಗ ಹಿಟಾಚಿ ಪಲ್ಟಿಯಾಗಿ ತಿಮ್ಮೇಶ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ಅನಿಲ್, ಭರಮಸಾಗರ ಠಾಣೆ ಸಿಪಿಐ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
