ಕ್ರೈಂ ಸುದ್ದಿ
ಹಿರಿಯೂರು ಬಳಿ KSRTC ಬಸ್ ಲಾರಿ ನಡುವೆ ಭೀಕರ ಅಪಘಾತ ನಾಲ್ಕ ಜನರ ಸಾವು

ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 150(ಎ)ರಲ್ಲಿ ಬೆಳ್ಳಂ ಬೆಳಗ್ಗೆ ಲಾರಿ ಹಾಗೂ ಕೆಎಸ್‍ಆರ್‍ಟಿಸಿ (KSRTC) ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ಸಿನಲ್ಲಿದ್ದ 4 ಜನ ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ರಾಯಚೂರು ರಾಯಚೂರು ಜಿಲ್ಲೆ ಮಸ್ಕಿ ಮೂಲದ ರಮೇಶ್(40) ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿಲ್ಲ.
ksrtc ಬಸ್ಸಿನಲ್ಲಿದ್ದ 6ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಚಿತ್ರದುರ್

ಅಪಘಾತದಿಂದ ನಜ್ಜುಗುಜ್ಜಾಗಿರುವ ಬಸ್
ಗ ಹೊವರಲಯದ ಮಲ್ಲಾಪುರ ಬಳಿ ಭೀಕರ ಅಪಘಾತ | ಸ್ಥಳದಲ್ಲೇ ನಾಲ್ವರು ಸಾವು.
ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ಸಿಗೆ ಹಿರಿಯೂರಿನ ಗೊಲ್ಲಹಳ್ಳಿ ಬಳಿ ಲಾರಿ ಡಿಕ್ಕಿಯಾಗಿದೆ. ಅಪಘಾತದ ನಂತರ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕೆಎಸ್‍ಆರ್‍ಟಿಸಿ ಬಸ್ಸಿನಲ್ಲಿ ಒಟ್ಟು 51 ಜನ ಪ್ರಯಾಣಿಸುತ್ತಿದ್ದರು.
ಅಪಘಾತದ ವೇಳೆ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರೆ, ಇನ್ನಿಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮರ್ಧಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಐಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಇತರೆ ಗಾಯಾಳುಗಳನ್ನು ಐಮಂಗಲ, ಹಿರಿಯೂರು ಹಾಗೂ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನು ಮಾಹಿತಿ ಲಭ್ಯವಾಗಿದೆ.
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/J6cH6HirXqYERmT1X09kSk)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
