
CHITRADURGA NEWS | 14 JULY 2024
ಹೊಸದುರ್ಗ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹೊಸದುರ್ಗ ತಾಲೂಕಿನಲ್ಲಿ ನಡೆದಿದೆ.
ಹೊಸದುರ್ಗ ತಾಲೂಕಿನ ತರೀಕೆರೆ-ಅಜ್ಜಂಪುರ ರಸ್ತೆಯ ಬೋಕಿಕೆರೆ ಗೇಟ್, ಪ್ರೇರಣಾ ಶಾಲೆ ಗೇಟ್ ಬಳಿ ಶನಿವಾರ ರಾತ್ರಿ 10 ಗಂಟೆ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಜ್ಯೂಸ್ ಕುಡಿಯುವಾಗ 3.50 ಲಕ್ಷ ದೋಚಿದ್ದ ಕಳ್ಳನ ಬಂಧನ | ಹೊಳಲ್ಕೆರೆ ಪೊಲೀಸರ ಕಾರ್ಯಚರಣೆ
ಅಪಘಾತದಲ್ಲಿ ಚಿಕ್ಕಮಗಳೂರು ಜಿಲ್ಲೆ ಸಿದ್ದಾಪುರ ಗ್ರಾಮದ 26 ವರ್ಷದ ಪ್ರವೀಣ್ ಹಾಗೂ ಹೊಸದುರ್ಗ ತಾಲೂಕು ಕಡಿವಾಣಕಟ್ಟೆ ಗ್ರಾಮದ 27 ವರ್ಷದ ಯೋಗೀಶ್ ಮೃತಪಟ್ಟಿದ್ದಾರೆ.
ಕುಂದಾಪುರ ಮೂಲದ ಕಾರಿಗೆ ಬೈಕ್ ಡಿಕ್ಕಿಯಾಗಿದ್ದ, ಮತ್ತೋರ್ವ ಬೈಕ್ ಸವಾರ ಅಜ್ಜಯ್ಯ ಎಂಬುವವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕಳಪೆ ಆಹಾರ | ಹಾಸ್ಟೆಲ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಇಬ್ಬರೂ ಬೈಕಿನಲ್ಲಿ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದಾಗ ಕಾರಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹೊಸದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
