
CHITRADURGA NEWS | 16 AUGUST 2024
ಚಿತ್ರದುರ್ಗ: ಹೆದ್ದಾರಿಯಲ್ಲಿ ಬಸ್ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟ ಘಟನೆ ತಾಲ್ಲೂಕಿನ ಸಿರಿಗೆರೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರ ಭರಮಸಾಗರ ಬೈಪಾಸ್ ಬಳಿ ಗುರುವಾರ ಬೆಳಗಿನ ಜಾವ ಖಾಸಗಿ ಬಸ್ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾನೆ.
ಕ್ಲಿಕ್ ಮಾಡಿ ಓದಿ: ತಡರಾತ್ರಿ ಚಿರತೆಯ ಅಟ್ಟಹಾಸ | ಬೆಚ್ಚಿದ ಗ್ರಾಮಸ್ಥರು

ಸುಗಮ್ ಟ್ರಾವೆಲ್ಸ್‌ಗೆ ಸೇರಿದ ಬಸ್ ದಾವಣಗೆರೆಯಿಂದ ಚಿತ್ರದುರ್ಗದ ಕಡೆಗೆ ಬರುತ್ತಿದ್ದಾಗ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಆದರೆ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
