
CHITRADURGA NEWS | 25 JULY 2024
ಚಿತ್ರದುರ್ಗ: ಕೆಲ ದಿನದ ಹಿಂದೆ ಮಂಡ್ಯ ಬಳಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಚಿಕ್ಕಜಾಜೂರಿನ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಟರಾಜ್ (50) ಮೃತಪಟ್ಟಿದ್ದಾರೆ.
ಮೃತರಿಗೆ ತಾಯಿ, ಪತ್ನಿ ಹಾಗೂ ಪುತ್ರ ಇದ್ದಾರೆ. ತಡರಾತ್ರಿ ಸಂಭವಿಸಿದ್ದ ಅಪಘಾತದಲ್ಲಿ ನಟರಾಜ್ ಅವರ ತಲೆ ಹಾಗೂ ಎದೆ ಭಾಗಕ್ಕೆ ತೀವ್ರವಾದ ಗಾಯವಾಗಿದ್ದು, ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಾಜಿ ಶಾಸಕ ಎಸ್.ಕೆ.ಬಸವರಾಜನ್ ವಿರುದ್ಧದ ಪ್ರಕರಣ ರದ್ದು
ಆರೋಗ್ಯ ತಪಾಸಣೆಗೆಂದು ಗೆಳೆಯರೊಂದಿಗೆ ಮೈಸೂರಿಗೆ ಕಾರಿನಲ್ಲಿ ಹೋಗುತ್ತಿದ್ದಾಗ, ಜುಲೈ 11ರಂದು ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ ಪಟ್ಟಿದ್ದರು. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
