CHITRADURGA NEWS | 03 AUGUST 2026
ಇಂದಿನ ಕಾಲದಲ್ಲಿ ಜನರು ವಾಸ್ತುಶಾಸ್ತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಹಾಗಾಗಿ ಮನೆಯಲ್ಲಿ ದೊಡ್ಡದು ಅಥವಾ ಚಿಕ್ಕದು ಯಾವುದನ್ನೇ ಇರಿಸಲು ಶುಭ ದಿಕ್ಕು ಯಾವುದು ಎಂದು ತಿಳಿಯಲು ವಾಸ್ತು ಶಾಸ್ತ್ರವನ್ನು ನೋಡುತ್ತಾರೆ. ಯಾಕೆಂದರೆ ಮನೆಯಲ್ಲಿ ವಸ್ತುಗಳನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ನಕಾರಾತ್ಮಕ ಶಕ್ತಿ ಉಂಟಾಗುತ್ತದೆ ಮತ್ತು ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ನಂಬಲಾಗಿದೆ. ಅಂದಹಾಗೇ ಮನೆಯಲ್ಲಿ ಮಕ್ಕಳ ಆಟಿಕೆಗಳನ್ನು ಎಲ್ಲೆಂದರಲ್ಲಿ ಎಸೆದಿರುತ್ತಾರೆ. ಆದರೆ ವಾಸ್ತುಶಾಸ್ತ್ರದಲ್ಲಿ ಆಟಿಕೆಗಳನ್ನು ಇಡಲು ಸರಿಯಾದ ದಿಕ್ಕನ್ನು ಸೂಚಿಸಲಾಗಿದೆ. ಹಾಗಾದ್ರೆ ಅದರ ಬಗ್ಗೆ ತಿಳಿದುಕೊಳ್ಳಿ.
ಮಕ್ಕಳ ಆಟಿಕೆಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು?
ಮನೆಯ ವಾಯುವ್ಯ ಮತ್ತು ಪಶ್ಚಿಮ ದಿಕ್ಕುಗಳಲ್ಲಿ ಮಕ್ಕಳ ಆಟಿಕೆಗಳನ್ನು ಇಡುವುದರಿಂದ ಮಕ್ಕಳ ಏಕಾಗ್ರತೆ ಮತ್ತು ಮಾನಸಿಕ ಬೆಳವಣಿಗೆ ಹೆಚ್ಚಾಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಇದು ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಹರಿವನ್ನು ಸೃಷ್ಟಿಸುತ್ತದೆ. ಇದು ಮಕ್ಕಳು ಮತ್ತು ಇತರ ಕುಟುಂಬ ಸದಸ್ಯರ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.
ಆಟಿಕೆಗಳಿಗೆ ಯಾವ ದಿಕ್ಕಿನಲ್ಲಿ ಇಟ್ಟರೆ ಅಶುಭ ?
ಮನೆಯ ನೈಋತ್ಯ ದಿಕ್ಕಿನಲ್ಲಿ ಆಟಿಕೆಗಳನ್ನು ಎಂದಿಗೂ ಇಡಬಾರದು. ವಾಸ್ತು ಶಾಸ್ತ್ರದ ಪ್ರಕಾರ , ಈ ದಿಕ್ಕಿನಲ್ಲಿ ಆಟಿಕೆಗಳನ್ನು ಇಡುವುದರಿಂದ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಹಠಮಾರಿತನಕ್ಕೆ ಕಾರಣವಾಗುತ್ತದೆ. ಇದಲ್ಲದೆ, ಈಶಾನ್ಯ ದಿಕ್ಕಿನಲ್ಲಿ ಮಕ್ಕಳ ಆಟಿಕೆಗಳನ್ನು ಸಂಗ್ರಹಿಸುವುದನ್ನು ಸಹ ತಪ್ಪಿಸಬೇಕು. ಈ ತಪ್ಪು ಸಕಾರಾತ್ಮಕ ಶಕ್ತಿಯ ಹರಿವನ್ನು ತಡೆಯುತ್ತದೆ. ಆದ್ದರಿಂದ, ಮಕ್ಕಳ ಆಟಿಕೆಗಳನ್ನು ಮನೆಗೆ ತರುವ ಮೊದಲು ವಾಸ್ತು ಶಾಸ್ತ್ರದ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದು.
ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ
ಆಟಿಕೆ ಮುರಿದರೆ ಅಥವಾ ಬಿರುಕು ಬಿಟ್ಟರೆ, ಅದನ್ನು ಮನೆಯಿಂದ ಹೊರಗೆ ಎಸೆಯಿರಿ. ಮನೆಯಲ್ಲಿ ಮುರಿದ ಅಥವಾ ಬಿರುಕು ಬಿಟ್ಟ ಆಟಿಕೆ ಇಡುವುದರಿಂದ ವಾಸ್ತು ದೋಷಗಳು ಉಂಟಾಗುತ್ತವೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ನಕಾರಾತ್ಮಕ ಶಕ್ತಿಯನ್ನು ಸಹ ಹೊಂದಿರುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಅಂತಹ ಆಟಿಕೆಗಳನ್ನು ಮನೆಯಲ್ಲಿ ಇಡುವುದನ್ನು ತಪ್ಪಿಸುವುದು ಒಳ್ಳೆಯದು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

