CHITRADURGA NEWS | 17 AUGUST 2026
ಚಿತ್ರದುರ್ಗ: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯಂದು ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಭಾನುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್ ಮಾತನಾಡಿ, ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಹಾಡಲಾದ ವಂದೇ ಮಾತರಂ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎನ್ನುವುದು ಅತ್ಯಂತ ಖಂಡನೀಯ. ಕೂಡಲೇ ಅವರು ದೇಶದ ಜನರ ಮುಂದೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್ ಮಾತನಾಡಿ, ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರು ರಚಿಸಿರುವ ವಂದೇ ಮಾತರಂ ಗೀತೆಯನ್ನು ಹಾಡುವ ಸಂದರ್ಭದಲ್ಲಿ ಅರ್ಧದಲ್ಲಿಯೇ ನಿಲ್ಲಿಸುವಂತೆ ಸೂಚಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೇಶದ ರಾಷ್ಟ್ರೀಯ ಗೀತೆಗೆ ಅಗೌರವ ತೋರುವಂತಹ ಯಾವುದೇ ನಡೆ ಖಂಡನೀಯ ಎಂದರು.
ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಲು ಅವಕಾಶ ನೀಡದೆ ಅರ್ಧದಲ್ಲಿಯೇ ನಿಲ್ಲಿಸುವಂತೆ ಸೂಚಿಸಿರುವುದು ದೇಶದ ಭಾವನೆಗಳಿಗೆ ಧಕ್ಕೆ ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ: ಹಿಂದೂ ಜಾಗರಣ ವೇದಿಕೆಯಿಂದ ಅಖಂಡ ಭಾರತ ಸಂಕಲ್ಪ
ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ವಸಂತ ಆಚಾರ್ ಮಾತನಾಡಿ, ಸುಮಾರು ಮೂರು ನಿಮಿಷ ಹತ್ತು ಸೆಕೆಂಡ್ ಅವಧಿಯ ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಲು ಬಿಡದೆ ಅರ್ಧದಲ್ಲಿಯೇ ಮೊಟಕುಗೊಳಿಸುವಂತೆ ಸೂಚಿಸಿರುವುದು ಖಂಡನೀಯ. ಈ ಬಗ್ಗೆ ಸೋನಿಯಾ ಗಾಂಧಿ ಬೇಷರತ್ತಾಗಿ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಗೌರವದಿಂದ ಆಚರಿಸುತ್ತಿರುವ ಸಂದರ್ಭದಲ್ಲಿ ವಂದೇ ಮಾತರಂ ಗೀತೆಗೆ ಅಗೌರವ ತೋರಿಸುವ ಯಾವುದೇ ನಡೆ ಸ್ವೀಕಾರಾರ್ಹವಲ್ಲ. ಮಾಡಿರುವ ತಪ್ಪಿಗೆ ಕ್ಷಮೆಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇದನ್ನೂ ಓದಿ: ಹಸೆಮಣೆ ಏರಲು ಸಜ್ಜಾದ ಜ್ಯೋತಿರಾಜ್
ಪ್ರತಿಭಟನೆಯಲ್ಲಿ ಯುವ ಮೋರ್ಚಾ ಹೊಳಲ್ಕೆರೆ ಮಂಡಲದ ಪ್ರತಾಪ್ ಸಿ.ಎಲ್., ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಜಿಲ್ಲಾ ಉಪಾಧ್ಯಕ್ಷ ಲಿಂಗರಾಜ್, ವಕ್ತಾರ ನಾಗರಾಜ್ ಬೇದ್ರೆ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಸೇರಿದಂತೆ ಬಸಮ್ಮ, ಸುಮ, ನಾಗರಾಜ್, ಸತೀಶ್ ಆಚಾರ್, ನಿತೀಶ್, ಆಕಾಶ್, ಪಾಪು, ರವಿ, ಮಹಾಂತೇಶ್, ಚಂದ್ರಶೇಖರ್, ಧನಂಜಯ್, ಅಖಿಲೇಶ್, ಬಾಲಾಜಿ, ಚಂದ್ರ, ಧನುಷ್, ವಿನಯ್, ವಿಜಯ್, ಕೀರ್ತಿ, ಅರುಣ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

