
CHITRADURGA NEWS | 03 SEPTEMBER 2026
ಚಿತ್ರದುರ್ಗ: ಮೇಜರ್ ಧ್ಯಾನ್‌ಚಂದ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಪ್ರಯುಕ್ತ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಗರದ ಪ್ರತಿಷ್ಠಿತ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಸಾರ್ವಜನಿಕರ ಹಿತಕ್ಕೆ ಮೊದಲ ಆದ್ಯತೆ | ಗಣಿ ಲಾರಿಗಳಿಗೆ ಕಟ್ಟುನಿಟ್ಟಿನ ನಿಯಮ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದುರ್ಗ ಸ್ಟ್ರೈಕರ್ಸ್ ವಾಲಿಬಾಲ್ ಕ್ಲಬ್ ಹಾಗೂ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಪಂದ್ಯಾವಳಿ ಆಯೋಜಿಸಲಾಗಿತ್ತು.
ಪಂದ್ಯಾವಳಿಯ 14 ವರ್ಷದೊಳಗಿನ ಜೂನಿಯರ್ ವಿಭಾಗದಲ್ಲಿ ಇಂಡಿಯನ್ ಇಂಟರ್‌ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡರು. ಇದೇ ವೇಳೆ 17 ವರ್ಷದೊಳಗಿನ ಸೀನಿಯರ್ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: ಆಂಧ್ರ DCM ಪವನ್‌ಕಲ್ಯಾಣ್ ಜನ್ಮ ದಿನಾಚರಣೆ | ಆಡುಮಲ್ಲೇಶ್ವರದಲ್ಲಿ ಪ್ರಾಣಿ ದತ್ತು ಸ್ವೀಕಾರ
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ. ರಘುಚಂದನ್, ಪ್ರಾಂಶುಪಾಲರು, ನಿರ್ದೇಶಕರು, ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

