
CHITRADURGA NEWS | 16 JANUARY 2024
ಚಿತ್ರದುರ್ಗ (CHITRADURGA): ಯುವಕನ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿರುವ ಘಟನೆ ಹಿರಿಯೂರು ನಗರದ ಬೈಪಾಸ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಬೈಪಾಸ್ ರಸ್ತೆಯಲ್ಲಿರುವ ವಿಎಂಪಿ ಮಹಲ್ ಹೋಟೆಲ್ ಬಳಿ ಕೆಎಸ್‌ಆರ್‌ಸಿ ಬಸ್ ಇಳಿದು ಶೌಚಾಲಯದ ಕಡೆ ತೆರಳುತ್ತಿದ್ದ ಹೊಳಲ್ಕೆರೆ ಮೂಲಕ ಅರುಣ್ ಕುಮಾರ್ ಮೇಲೆ ದುಷ್ಕರ್ಮಿಗಳು ಏಕಾಏಕಿ ಆಸಿಡ್ ದಾಳಿ ನಡೆಸಿದ್ದಾರೆ. ದಾಳಿಯಿಂದ ಯುವಕನ ತಲೆ- ಕೈ, ಮುಖಕ್ಕೆ ಗಂಭೀರ ಗಾಯವಾಗಿವೆ.
ಹೊಳಲ್ಕೆರೆಯಿಂದ ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತೆರಳುತ್ತಿದ್ದ ಅರುಣ್ ಕುಮಾರ್ ನನ್ನು ಹೊಳಲ್ಕೆರೆಯಿಂದಲೇ ದುಷ್ಮರ್ಮಿಗಳು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 50 ಸಾವಿರದ ಗಡಿ ತಲುಪಿದ ಅಡಿಕೆ ಬೆಲೆ
ಗಾಯಾಳು ಅರುಣ್ ಕುಮಾರ್‌ನನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಪಿಐ ರಾಘವೇಂದ್ರ ಕಾಂಡಿಕೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
