
CHITRADURGA NEWS | 01 AUGUST 2025
ಚಿತ್ರದುರ್ಗ: ಕನ್ನಡವನ್ನು ನಿರ್ಲಕ್ಷಿಸುವ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷೆ ಜೆ.ಯಾದವರೆಡ್ಡಿ ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಕೃಷಿ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ

ಕರುನಾಡ ವಿಜಯಸೇನೆಯಿಂದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮರಣ ಶಾಸನ, ರಾಜಕಾರಣಿಗಳಲ್ಲಿನ ಇಚ್ಚಾಶಕ್ತಿ ಕೊರತೆ, ಅಧಿಕಾರಿಗಳ ಅಸಡ್ಡೆಯಿಂದ ಕನ್ನಡ ಸೊರಗುತ್ತಿದೆ.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆಯಾಗಬೇಕೆಂದು ಅನೇಕ ಹೋರಾಟಗಾರರು ಚಿಂತಕರು, ಸಾಹಿತಿಗಳು ಹಿಂದಿನಿಂದಲು ಚಳುವಳಿಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ. ಆದರೂ ಕನ್ನಡ ಪೂರ್ಣ ಪ್ರಮಾಣದಲ್ಲಿ ಆಡಳಿತ ಭಾಷೆಯಾಗಿಲ್ಲ. ಇಂಗ್ಲಿಷ್‍ನಲ್ಲಿ ಷರಾ ಬರೆಯುವುದು ಇನ್ನು ನಿಂತಿಲ್ಲ ಎಂದರು.
ಬೆಂಗಳೂರಿನಲ್ಲಿ ಮೆಟ್ರೋ ಉದ್ಘಾಟನೆಯಲ್ಲಿ ಹಿಂದಿ ಬಳಸಿ ಕನ್ನಡಕ್ಕೆ ಅಪಮಾನ ಮಾಡಲಾಗಿದೆ. ಕನ್ನಡಪರ ಸಂಘಟನೆಗಳು ಉಗ್ರ ಹೋರಾಟ ಮಾಡಿವೆ. ಇಂಗ್ಲಿಷ್ ಮತ್ತು ಹಿಂದಿ ಭಾಷೆಯನ್ನು ಕನ್ನಡದ ಮೇಲೆ ಹೇರಲಾಗುತ್ತಿದೆ. ಹೋರಾಟಗಾರರ ಮೇಲೆ ನೂರಾರು ಕೇಸುಗಳು ಬಿದ್ದಿವೆ. ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ಆಗ್ರಹಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾತನಾಡಿ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು, ಆಸ್ಪತ್ರೆಗಳಲ್ಲಿ ಶೇ.60 ರಷ್ಟು ಕನ್ನಡ ನಾಮ ಫಲಕವಿರಬೇಕೆಂದು ಸರ್ಕಾರ ಆದೇಶಿಸಿದ್ದರೂ ಸರಿಯಾಗಿ ಪಾಲನೆಯಾಗುತ್ತಿಲ್ಲ.
ಸಾಕಷ್ಟು ಹೋರಾಟ ಮಾಡಿ ಇಂಗ್ಲಿಷ್ ನಾಮಫಲಕಗಳಿಗೆ ಮಸಿ ಬಳಿದು ಬೋರ್ಡ್‍ಗಳನ್ನು ಕಿತ್ತು ಹಾಕಿದ್ದೇವೆ. ನಮ್ಮ ಪ್ರಾಣ ಹೋದರು ಸರಿ ಹೋರಾಟದಿಂದ ಮಾತ್ರ ಹಿಂದೆ ಸರಿಯುವುದಿಲ್ಲ. ನಗರಸಭೆಯವರು ಟ್ರೇಡ್ ಲೈಸೆನ್ಸ್ ಕೊಡುವಾಗ ಕಡ್ಡಾಯವಾಗಿ ಕನ್ನಡ ನಾಮಫಲಕವಾಕಬೇಕೆಂದು ಸೂಚಿಸಬೇಕು. ಇನ್ನು ಎರಡು ತಿಂಗಳು ಗಡುವು ನೀಡುತ್ತೇವೆ. ಆಂಗ್ಲ ನಾಮ ಫಲಕಗಳು ಕಂಡು ಬಂದರೆ ಮಸಿ ಬಳಿಯುವುದಾಗಿ ಎಚ್ಚರಿಸಿದರು.
ಲೇಖಕ ಹೆಚ್.ಆನಂದ್‍ಕುಮಾರ್ ಮಾತನಾಡಿ, ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಕೇಸ್‍ಗಳನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು. ಕನ್ನಡಪರ, ದಲಿತರ ಪರ, ಅಹಿಂದಾ ಪರವಾಗಿದ್ದೇನೆಂದು ಹೇಳುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನುಡಿದಂತೆ ನಡೆದುಕೊಳ್ಳುತ್ತಿಲ್ಲ. ಕನ್ನಡದ ಧ್ವನಿ, ಅಸ್ಮಿತೆಗೆ ಧಕ್ಕೆ ಬಂದಾಗ ಬೀದಿಗಿಳಿಯುವ ಹೋರಾಟಗಾರರ ಮೇಲೆ ಕೇಸ್ ಹಾಕುವುದು, ಗಡಿಪಾರು ಮಾಡುವುದನ್ನು ಸರ್ಕಾರ ಕೈಬಿಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ: KSRTC ಬಸ್ ಡಿಕ್ಕಿ | ಬೈಕ್ ಸವಾರ ಮೃತ
ಕರುನಾಡ ವಿಜಯಸೇನೆ ಮಹಿಳಾ ಘಟಕದ ಅಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ರಾಜ್ಯ ಸಮಿತಿ ಸದಸ್ಯ ನಿಸಾರ್ ಅಹಮದ್, ನಗರಾಧ್ಯಕ್ಷ ಅವಿನಾಶ್, ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಇತರರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
