By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    8 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    10 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    10 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    10 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    14 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    22 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    20 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    21 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ಬೆಳೆ ಕಟಾವು ನಿರ್ಲಕ್ಷ್ಯ ತೋರಿದರೆ ಕ್ರಮ | ಅಧಿಕಾರಿಗಳಿಗೆ ಎಡಿಸಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬೆಳೆ ಕಟಾವು ನಿರ್ಲಕ್ಷ್ಯ ತೋರಿದರೆ ಕ್ರಮ | ಅಧಿಕಾರಿಗಳಿಗೆ ಎಡಿಸಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಕೆ

News Desk Chitradurga News
Last updated: 15 June 2024 18:04
News Desk Chitradurga News
2 years ago
Share
adc meeting
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ 11ನೇ ಕೃಷಿ ಗಣತಿ ಹಾಗೂ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ-ಅಂಶಗಳ ಮೊದಲನೇ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು.
SHARE

CHITRADURGA NEWS | 15 JUNE 2024
ಚಿತ್ರದುರ್ಗ:‌ ಬೆಳೆ ಕಟಾವು ಪ್ರಯೋಗ ಆಧರಿಸಿ, ಬೆಳೆ ವಿಮೆ ಕಂಪನಿಗಳು ವಿಮೆ ಮೊತ್ತ ನಿರ್ಧರಿಸುತ್ತವೆ. ಸರಿಯಾದ ಸಮಯಕ್ಕೆ ಕಟಾವು ಪ್ರಯೋಗ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದರ ಪರಿಣಾಮ ಜಿಲ್ಲೆಯ ರೈತರು ಸಮಸ್ಯೆ ಅನುಭವಿಸುವಂತಾಗಿದೆ. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ 11ನೇ ಕೃಷಿ ಗಣತಿ ಹಾಗೂ 2024-25ನೇ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ-ಅಂಶಗಳ ಮೊದಲನೇ ತ್ರೈಮಾಸಿಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳಕಟಾವು ಯೋಜನೆ ಪಟ್ಟಿ ಬಿಡುಗಡೆಗೊಂಡ ಕೂಡಲೇ ನಮೂನೆ-1 ನ್ನು ಕೈಗೊಳ್ಳಲು ಇಲಾಖಾ ಮುಖ್ಯಸ್ಥರು ಅನುವು ಮಾಡಿಕೊಡಬೇಕು. ಕಟಾವು ಪ್ರಯೋಗದ ಸಿಸಿಇ ಮೊಬೈಲ್‌ ಅಪ್ಲಿಕೇಷನ್ ಡೌನ್‌ಲೋಡ್ ಮಾಡಿಕೊಂಡು ನಮೂನೆ-1 ಕೈಗೊಳ್ಳಲು ಸೂಕ್ತ ಕ್ರಮ ವಹಿಸಬೇಕು ಎಂದರು.

ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಕುಟುಂಬದ ಜತೆ ನಾವಿದ್ದೇವೆ | ಚಲನಚಿತ್ರ ವಾಣಿಜ್ಯ ಮಂಡಳಿ

ಬೆಳೆ ಕಟಾವು ಪ್ರಯೋಗದಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ಮೊಬೈಲ್ ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ತುಂಬಬೇಕು. ಬೆಳೆ ಕಟಾವು ಪ್ರಯೋಗ ಮಾಡಲು ನಿಯೋಜಿಸಿದ ಅಧಿಕಾರಿ ಹಾಗೂ ನೌಕರರೇ ಖುದ್ದಾಗಿ ರೈತರ ಜಮೀನಿಗೆ ತೆರಳಿ ಪ್ರಯೋಗ ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಳೆ ಕಟಾವು ಪ್ರಯೋಗ ಮಾಡದೇ ಇದ್ದಲ್ಲಿ ಅಥವಾ ನಿರ್ಲಕ್ಷ್ಯದಿಂದ ತಪ್ಪಾಗಿ ಮಾಹಿತಿ ತುಂಬಿದರೆ ಕಟಾವು ಪ್ರಯೋಗ ಮಾಡಿದ ಅಧಿಕಾರಿಯನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಛಾಯಾಚಿತ್ರವನ್ನು ಸೆರೆ ಹಿಡಿಯುವಾಗ ತೂಕದ ಯಂತ್ರವು ಹಾಗೂ ಉತ್ಪನ್ನವು ಕಾಣುವ ರೀತಿಯಲ್ಲಿ ಇರಬೇಕು. ಇಲ್ಲವಾದರೆ ಕಟಾವು ಪ್ರಯೋಗ ಅನೂರ್ಜಿತವಾಗಲಿದೆ ಎಂದರು.

ಕ್ಲಿಕ್ ಮಾಡಿ ಓದಿ: ಗೋವಾ ಪ್ರವಾಸ ವೇಳೆ ಭೀಕರ ಅಪಘಾತ | ಮೃತರ ಗುರುತು ಪತ್ತೆ

ಛಾಯಾಚಿತ್ರವನ್ನು ಸೆರೆ ಹಿಡಿಯುವಾಗ ತೂಕದ ಯಂತ್ರವು ಹಾಗೂ ಉತ್ಪನ್ನವು ಕಾಣುವ ರೀತಿಯಲ್ಲಿ ಇರಬೇಕು. ಬಂದಿರುವಂತಹ ತೂಕವನ್ನು ಸ್ಪಷ್ಟವಾಗಿ ಗೋಚರವಾಗುವ ರೀತಿಯಲ್ಲಿ ಫೋಟೊದಲ್ಲಿ ಸೆರೆ ಹಿಡಿಯಬೇಕು. ಉತ್ಪನ್ನ ಹಾಗೂ ಉಪ ಉತ್ಪನ್ನಗಳನ್ನು ನಿರ್ದಿಷ್ಟ ಕಾಲಂಗಳಲ್ಲಿಯೇ ತುಂಬಬೇಕು. ತೂಕದ ಯಂತ್ರದಲ್ಲಿರುವ ಹೋಲ್ಡ್ ಬಟನ್ ಪ್ರೆಸ್ ಮಾಡಿ ತೂಕವು ಸ್ಥಿರವಾದ ನಂತರವೇ ಫೋಟೋ ತೆಗೆಯಬೇಕು ಎಂದು ಸೂಚಿಸಿದರು.

ಬೆಳೆ ಕಟಾವು ನಿಯಮಾನುಸಾರ ಮಾಡದೇ, ರೈತರಿಗೆ ಬೆಳೆ ವಿಮೆಯ ಮೊತ್ತ ದೊರಕದೇ ಹೋದಲ್ಲಿ ಅಥವಾ ಕಡಿಮೆ ಮೊತ್ತ ದೊರೆತರೆ, ಕಟಾವು ಪ್ರಯೋಗ ಕೈಗೊಂಡ ಅಧಿಕಾರಿ ವೇತನದಲ್ಲಿ ಮೊತ್ತ ಕಟಾವುಗೊಳಿಸಿ, ರೈತರಿಗೆ ನಷ್ಟ ಪರಿಹಾರ ತುಂಬಿಕೊಡಲಾಗುವುದು ಎಂದು ಎಚ್ಚರಿಸಿದರು.

ಕೃಷಿ, ತೋಟಗಾರಿಕೆ. ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಹಂಚಿಕೆ ಮಾಡಿದ ಬೆಳೆ ಕಟಾವುಗಳನ್ನು ಸರಿಯಾದ ಸಮಯಕ್ಕೆ ನಡೆಸಬೇಕು. ಯಾವುದೇ ಸಬೂಬು ಸಲ್ಲದು. ಬೆಳಿ ಕಟಾವು ಪ್ರಯೋಗ ಪಾರದರ್ಶಕವಾಗಿ ನಡೆಯಲು ರೈತರು, ವಿಮಾ ಕಂಪನಿಯ ಅಧಿಕಾರಿಗಳು, ಮೇಲ್ವಿಚಾರಕರಿದ್ದಲ್ಲಿ ಅವರನ್ನು ಸಹ ಬೆಳೆ ಕಟಾವು ಪ್ರಯೋಗದ ಸಂದರ್ಭದಲ್ಲಿ ಕಡ್ಡಾಯವಾಗಿ ಹಾಜರಾಗಿರುವಂತೆ ಕ್ರಮವಹಿಸಬೇಕು ಎಂದರು.

ಕ್ಲಿಕ್ ಮಾಡಿ ಓದಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಮಾತಿಲ್ಲ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

ಬೆಳೆ ಸಮೀಕ್ಷೆ ದತ್ತಾಂಶದ ಶೇ.1% ಪರಿಶೀಲನೆಯನ್ನು ಆಪ್ ಬಿಡುಗಡೆಯಾದ ತಕ್ಷಣವೇ ನಿಯೋಜಿಸಿದ ಅಧಿಕಾರಿಗಳು ನಿಯೋಜಿಸಿದ ಪ್ಲಾಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಫೋಟೋ ತೆಗೆದು ಮೊಬೈಲ್ ಆಪ್ ನಲ್ಲಿ ಅಪ್ಲೋಡ್ ಮಾಡಲು ಸೂಚಿಸಿದರು. ಯಾವುದೇ ಕಾರಣಕ್ಕೂ ನಿಯೋಜಿಸಿದ ಪ್ಲಾಟ್ ಗಳನ್ನು ಪರಿಶೀಲನೆ ಕೈಗೊಳ್ಳದೇ ಬಾಕಿ ಉಳಿಸುವಂತಿಲ್ಲ ಎಂದು ತಿಳಿಸಿದರು.

ಬೆಳ ಕಟಾವಿನ ಪ್ರಯೋಗದಲ್ಲಿ ನಿರ್ಲಕ್ಷ್ಯ ತೋರಿ ಪ್ರಯೋಗಗಳ ಅನೂರ್ಜಿತಕ್ಕೆ ಕಾರಣರಾದ ಎಲ್ಲಾ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಾಗುವುದು. ಗಂಭೀರ ಪ್ರಕರಣಗಳಲ್ಲಿ ಅಮಾನತು ಮಾಡಲಾಗುವುದು. ಅನೂರ್ಜಿತಗೊಂಡ ಪ್ರಯೋಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಜಿಲ್ಲಾ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿಗೆ ನಿರ್ದೇಶನ ನೀಡಿದರು.

2023-24ನೇ ಸಾಲಿನ ನಮೂನೆ ಎರೆಡನೇ ಹಂತದಲ್ಲಿ ಮುಂಗಾರು ಹಂಗಾಮಿನ ನಮೂನೆ-2 ರ ಹಂತದಲ್ಲಿ 1 ಹಾಗೂ ಹಿಂಗಾರು ಹಂಗಾಮಿನ ನಮೂನೆ-2ರ ಹಂತದಲ್ಲಿ 3 ಹಾಗೂ ಬೇಸಿಗೆ ಹಂಗಾಮಿನ ನಮೂನೆ-2 ರ ಹಂತದಲ್ಲಿ 1 ಬೆಳೆ ಕಟಾವು ಪ್ರಯೋಗಗಳು ಅನೂರ್ಜಿತವಾಗಿವೆ ಎಂದು ಜಿಲ್ಲಾ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿ ರವಿಕುಮಾರ್.ಎನ್ ಸಭೆಯಲ್ಲಿ ತಿಳಿಸಿದರು.

ಮುಂಗಾರು ಹಂಗಾಮಿನಲ್ಲಿ ಒಟ್ಟು 31 ಪ್ರಕರಣಗಳಲ್ಲಿ ಕಟಾವು ಪ್ರಯೋಗದ ಪೋಟೋಗಳು ಹೊಂದಾಣಿಕೆಯಾಗಿಲ್ಲ. ಒಟಾರೆ 3 ಹಂಗಾಮಿನ ಕಟಾವು ಪ್ರಯೋಗಳಲ್ಲಿ 89 ಪ್ರಯೋಗಳಿಗೆ ಆಕ್ಷೇಪಣೆ ಸಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟೀಕರಣಕ್ಕೆ ನೋಟಿಸು ನೀಡಲಾಗಿದೆ ಎಂದರು.

2023-24ನೇ ಬೇಸಿಗೆ ಹಂಗಾಮಿನಿ ಕಟಾವು ಪ್ರಯೋಗ ಬಹುತೇಕ ಪೂರ್ಣವಾಗಿದೆ. ಜಿಲ್ಲೆಗೆ ಒಟ್ಟು 546 ಬೆಳೆ ಕಟಾವು ಪ್ರಯೋಗ ಕೈಗೊಳ್ಳಲು ಯೋಜಿಸಲಾಗಿತ್ತು. ಇದರಲ್ಲಿ ಕಂದಾಯ ಇಲಾಖೆಗೆ 248, ಕೃಷಿ ಇಲಾಖೆಗೆ 66, ತೋಟಗಾರಿಕೆ ಇಲಾಖೆಗೆ 62 ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗೆ 170 ಪ್ರಯೋಗಗಳನ್ನು ಹಂಚಿಕೆ ಮಾಡಲಾಗಿದೆ. ಈ ಎಲ್ಲಾ ಪ್ರಯೋಗಗಳ ಫಾರಂ-1 ಪೂರ್ಣಗೊಂಡಿವೆ. ಆದರೆ 546 ಪ್ರಯೋಗಳ ಪೈಕಿ 13 ಪ್ರಯೋಗಗಳ ಫಾರಂ-2 ಪೂರ್ಣಗೊಂಡಿಲ್ಲ ಎಂದು ರವಿಕುಮಾರ್.ಎನ್ ಮಾಹಿತಿ ನೀಡಿದರು.

ಸಭೆಯಲ್ಲಿ 2021-22ನೇ ಸಾಲಿನ 11ನೇ ಕೃಷಿ ಗಣತಿ ವರದಿ ಕುರಿತು ಚರ್ಚಿಸಲಾಯಿತು. 2015-16ನೇ ಸಾಲಿನ 10ನೇ ಕೃಷಿ ಗಣತಿ ಅನುಸಾರ ಜಿಲ್ಲೆಯಲ್ಲಿ 3,01,539 ವೈಯಕ್ತಿಕ ಹಿಡುವಳಿದಾರರು ಇದ್ದು, 5,48,344 ಹೆಕ್ಟೇರ್ ಸಾಗುವಳಿ ಭೂಮಿ ಇತ್ತು. ಸದ್ಯದ 11ನೇ ಕೃಷಿ ಗಣತಿಯಲ್ಲಿ 3,66,453 ವೈಯಕ್ತಿಕ ಹಿಡುವಳಿದಾರರು ಹಾಗೂ 5,75,498 ಹೆಕ್ಟೇರ್ ಸಾಗುವಳಿ ಭೂಮಿ ಇರುವುದಾಗಿ ತಿಳಿದು ಬಂದಿದೆ ಎಂದರು.

ಸಾಗುವಳಿ ಭೂಮಿ ಕ್ಷೇತ್ರದಲ್ಲಿ 27,154 ಹೆಕ್ಟೇರ್ ಅಂದರೆ ಸುಮಾರು 68 ಸಾವಿರ ಎಕರೆ ಸಾಗುವಳಿ ಭೂಮಿ ಹೆಚ್ಚಳವಾಗಿದೆ. ಇಷ್ಟು ಪ್ರಮಾಣದ ಸಾಗುವಳಿ ಭೂಮಿ ಹೆಚ್ಚಳವಾಗಲು ಸಾಧ್ಯವಿಲ್ಲ. ತಾಲ್ಲೂಕುವಾರು ತಹಶೀಲ್ದಾರಗಳಿಂದ ಮತ್ತೊಮ್ಮೆ ಮಾಹಿತಿ ಪಡೆದು ಕೃಷಿ ಗಣತಿ ವರದಿಯನ್ನು ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ ಸಭೆಯಲ್ಲಿ ಮಂಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳೊಗೆ ಸೂಚನೆ ನೀಡಿದರು.

ಇದೇ ವೇಳೆ 11 ಕೃಷಿ ಗಣತಿಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಶೇ.5 ರಷ್ಟು ಹಾಗೂ ಪರಿಶಿಷ್ಟ ಪಂಗಡದ ಶೇ.6 ರಷ್ಟು ಸಾಗುವಳಿ ಭೂಮಿ ಪ್ರಮಾಣವು 2015-16ನೇ ಗಣತಿಗಿಂತಲೂ ಕಡಿಮೆಯಾಗಿದೆ. ಜಿಲ್ಲೆಯ ಮಹಿಳಾ ಸಾಗುವಳಿ ಹಿಡುವಳಿದಾರರ ಸಂಖ್ಯೆ 2015-16ನೇ ಗಣತಿಯಲ್ಲಿ 73,405 ಇದ್ದು, ಪ್ರಸ್ತುತ ಗಣತಿಯಲ್ಲಿ 1,10,687 ಕ್ಕೆ ಏರಿಕೆಯಾಗಿದೆ.

ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೆಶಕ ಮಂಜುನಾಥ, ಉಪನಿರ್ದೇಶಕರುಗಳಾದ ಪ್ರಭಾಕರ್, ಶಿವಕುಮಾರ್, ಸಹಾಯಕ ಅಂಕೆ ಸಂಖ್ಯೆ ಸಂಗ್ರಹಣಾಧಿಕಾರಿಗಳಾದ ಅಶ್ವತ್ಥಾಮ, ವೀಣಾ, ಚಂದ್ರಪ್ಪ, ಸಹಾಯಕ ನಿರ್ದೇಶಕರುಗಳಾದ ಶಶಿರೇಖಾ, ಯಾಸಿನ್ ಸೇರಿದಂತೆ ಇತರೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ActionadccautionharvestNegligenceಎಚ್ಚರಿಕೆಎಡಿಸಿಕ್ರಮನಿರ್ಲಕ್ಷ್ಯಬೆಳೆ ಕಟಾವು
Share This Article
Facebook Email Print
Previous Article mla k.c.puppy ರೇಣುಕಾಸ್ವಾಮಿ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಮಾತಿಲ್ಲ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Next Article arecanut price list ಚನ್ನಗಿರಿ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆ ಹೆಚ್ಚಳ
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up