CHITRADURGA NEWS | 02 AUGUST 2024
ಚಿತ್ರದುರ್ಗ: ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಟ್ರೈಲರ್ ರಿಲೀಸ್ ಬಿಡುಗಡೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಚಿತ್ರದ ನಾಯಕ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯುತ್ತಿದ್ದಾರೆ.
ಆಷಾಢ ಮಾಸದ ನಾಲ್ಕನೇ ಶುಕ್ರವಾರ ನಗರದ ಮುರುಘಾ ರಾಜೇಂದ್ರ ಬೃಹನ್ಮಠಕ್ಕೆ ಭೇಟಿ ನೀಡಿ ಮಠದ ಕರ್ತೃ ಗದ್ದುಗೆ ಪೂಜೆ ಸಲ್ಲಿಸಿದರು. ಇದೇ ವೇಳೆ ಶ್ರೀ ಬಸವಪ್ರಭು ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಇದನ್ನೂ ಓದಿ: ಬಾಲ್ಯ ವಿವಾಹ ಪ್ರಕರಣ | ಎಫ್‌ಐಆರ್ ದಾಖಲು
ಬಳಿಕ ಮಾತನಾಡಿದ ಧೃವ ಸರ್ಜಾ, ‘ಮಾರ್ಟಿನ್ ಚಿತ್ರದ ಟ್ರೈಲರ್ ಆಗಸ್ಟ್ 5 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಅಂತರ ರಾಷ್ಟ್ರೀಯ ಮಟ್ಟದ ಸುದ್ದಿಗೋಷ್ಠಿ ಕರೆಯಲಾಗಿದೆ. ಅಲ್ಲಿಗೆ ತೆರಳುವ ಮೊದಲು ಪುಣ್ಯಕ್ಷೇತ್ರಗಳಾದ ಸಿದ್ಧಗಂಗಾ ಮಠ ಹಾಗೂ ಚಿತ್ರದುರ್ಗದ ಮುರುಘಾ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇನೆ’ ಎಂದರು.
ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
ಈ ವೇಳೆ ಕೆಲ ಅಭಿಮಾನಿಗಳು ಎರಡು ವರ್ಷಕ್ಕೊಂದು ಸಿನಿಮಾ ಬಿಡುಗಡೆಯಾಗುತ್ತಿವೆ. ಇನ್ನೂ ಮುಂದೆ ವರ್ಷಕ್ಕೊಮ್ಮೆ ಸಿನಿಮಾ ಬಿಡುಗಡೆಯಾಗಲಿ ಎಂದು ಒತ್ತಾಯಿಸಿದರು. ನೆಚ್ಚಿನ ನಟನನ್ನು ನೋಡಲು ಮುರುಘಾ ಮಠದಲ್ಲಿ ಅಭಿಮಾನಿಗಳ ದಂಡು ನೆರೆದಿತ್ತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

