Connect with us

    Zilla Panchayat election; ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ | ಬಿ.ವೈ.ವಿಜಯೇಂದ್ರ ಕರೆ

    ಬಿಜೆಪಿ ಸದಸ್ಯತ್ವ ಅಭಿಯಾನವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಿದರು

    ಮುಖ್ಯ ಸುದ್ದಿ

    Zilla Panchayat election; ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ | ಬಿ.ವೈ.ವಿಜಯೇಂದ್ರ ಕರೆ

    CHITRADURGA NEWS | 23 SEPTEMBER 2024

    ಚಿತ್ರದುರ್ಗ: ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗೆ ಚುನಾವಣೆ(Zilla Panchayat election) ಬರಲಿದೆ. ಈಗಿನಿಂದಲೇ ಕಾರ್ಯಕರ್ತರು ಪಕ್ಷ ಸಂಘಟನೆ ಮಾಡಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದರು.

    ಕ್ಲಿಕ್ ಮಾಡಿ ಓದಿ: Selection of 87 villages; ಮೂಲ ಸೌಲಭ್ಯ ಅಭಿವೃದ್ಧಿಗೆ ಜಿಲ್ಲೆಯ 87 ಗ್ರಾಮಗಳ ಆಯ್ಕೆ

    ನಗರದ ಮಾಳಪ್ಪನಹಟ್ಟಿ ತಿರುಮಲ ಕಲ್ಯಾಣ ಮಂಟಪದಲ್ಲಿ ಸೋಮವಾರ ಬಿಜೆಪಿ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನದ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು.

    ರಾಜ್ಯದಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವತನಕ ಮನೆಯಲ್ಲಿ ಕೂರುವುದಿಲ್ಲ ಎಂದರು.

    ಈ ಸರ್ಕಾರದಲ್ಲಿ ಮುಖ್ಯಮಂತ್ರಿ ಮೈಸೂರಿಗೆ, ಉಪಮುಖ್ಯಮಂತ್ರಿ ಬೆಂಗಳೂರಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಬರ, ನೆರೆ ಬಂದರೂ ರಾಜ್ಯ ಪ್ರವಾಸ ಮಾಡುತ್ತಿಲ್ಲ ಎಂದರು.

    ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅನೇಕ ಉತ್ತಮ ಯೋಜನೆಗಳನ್ನು ಕೊಟ್ಟಿದ್ದಾರೆ. ಆಪಾದನೆಗಳನ್ನು ಎದುರಿಸಿ ಅಧಿಕಾರ ಕಳೆದುಕೊಳ್ಳುವಂತಾಯ್ತು. ಐದು ಗ್ಯಾರೆಂಟಿಗಳ ಮೂಲಕ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಲೀಕಸಭೆ ಚನಾವಣೆ ನಂತರ ಗೃಹಲಕ್ಷ್ಮಿ ಹಣ ಹಾಕಿಲ್ಲ. ಮುಂದೆ ಜಿಪಂ ಚುನಾವಣೆ ಬಂದಾಗ ಹಾಕುತ್ತಾರೆ ಎಂದರು.

    ಕ್ಲಿಕ್ ಮಾಡಿ ಓದಿ: Arecanut: ಅಡಿಕೆ ಧಾರಣೆ | ಶಿವಮೊಗ್ಗ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಚೇತರಿಕೆ

    ಕಲ್ಯಾಣ ಕರ್ನಾಟಕಕ್ಕೆ 11 ಸಾವಿರ ಕೋಟಿ ಘೋಷಣೆ ಮಾಡಿ ಆ ಭಾಗದ ಜನರ ಕಿವಿಗೆ ಹೂವು ಇಡುವ ಕೆಲಸ ಮಾಡಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅನುಭವ ಮಂಟಪ ಅಭಿವೃದ್ದಿಗೆ ಆರು ಕೋಟಿ ರೂ.ಗಳನ್ನು ಘೋಷಿಸಿದ್ದರು. ಬಸವರಾಜ ಬೊಮ್ಮಾಯಿ ನೀರಾವರಿಗೆ 18 ಸಾವಿರ ಕೋಟಿ ರೂ. ಘೋಷಿಸಿದ್ದರು. ಆದರೆ, ಈಗಿನ ಮುಖ್ಯಮಂತ್ರಿ ಎಲ್ಲದಕ್ಕೂ ತಡೆ ಹಾಕಿಕೊಂಡು ಕುಳಿತ್ತಿದ್ದಾರೆ ಎಂದು ದೂರಿದರು.

    ವಾಲ್ಮೀಕಿ ಅಭಿವೃದ್ದಿ ನಿಗಮದ 187 ಕೋಟಿ ರೂ.ಗಳನ್ನು ತೆಲಂಗಾಣದ ಹತ್ತು ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಮುಡಾ ಹಗರಣ, ಎಸ್‌ಇಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಮಾಡಿರುವ ಸಿದ್ದರಾಮಯ್ಯನವರಿಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲವಾಗಿದೆ.

    ಒಂಟಿ ಕಾಲಿನಲ್ಲಿ ನಿಂತಿರುವ ಈ ಕಾಂಗ್ರೆಸ್ ಸರ್ಕಾರ ಯಾವಾಗ ಬಿದ್ದು ಹೋಗುತ್ತದೆಯೋ ಗೊತ್ತಿಲ್ಲ. ಆದರೆ, ಕುರ್ಚಿಗಾಗಿ ಕಾದಾಟ ಶುರುವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿ ಕುಳಿತು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೀಸಲಾತಿ ರದ್ದು ಮಾಡುವ ಹೇಳಿಕೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದ್ದಾರೆ. ಈ ಕಾರಣಕ್ಕೆ ನಾಗಮಂಗಲದಲ್ಲಿ ಗಣೇಶ ಮೆರವಣಿಗೆಯಲ್ಲಿ ಗಲಾಟೆಯಾಗಿದೆ. ನಮ್ಮ ಕಾರ್ಯಕರ್ತರ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಪಾಂಡವಪುರದ ಪಕ್ಷದ ಕಾರ್ಯಾಲಯಕ್ಕೆ ಪೊಲೀಸರು ಬೂಟುಗಾಲಿನಲ್ಲಿ ಪ್ರವೇಶ ಮಾಡಿದ್ದಾರೆ. ಇನ್ನಾದರೂ ನಮ್ಮ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

    ಕ್ಲಿಕ್ ಮಾಡಿ ಓದಿ: Hi-Tech Harvester Hub; ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಅಹ್ವಾನ 

    ಸಂಸದ ಗೋವಿಂದ ಕಾರಜೋಳ ಮಾತನಾಡಿ, ದೇಶದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಶುರುವಾಗಿದೆ. ಚಿತ್ರದುರ್ಗದಲ್ಲಿ ಲೋಕಸಭೆ ಗೆದ್ದ ನಂತರ ಕಾರ್ಯಕರ್ತರಿಗೆ ಆನೆ ಬಲ ಬಂದಂತಾಗಿದೆ. ಆದರೆ ಸದಸ್ಯತ್ವಾ ಅಭಿಯಾನದಲ್ಲಿ ಜಿಲ್ಲೆ ಹಿಂದುಳಿದಿದೆ. ಮೂರುವರೆ ಲಕ್ಷ ಸದಸ್ಯತ್ವಾ ಗುರಿ ನೀಡಿದೆ. ಕಾರ್ಯಕರ್ತರು ಮನಸ್ಸು ಮಾಡಿದರೆ ಇದು ದೊಡ್ಡದಲ್ಲ ಎಂದರು.

    ಎಂಎಲ್ಸಿ ಕೆ.ಎಸ್.ನವೀನ್ ಮಾತನಾಡಿ, ಜಿಲ್ಲೆಯಲ್ಲಿ ಗಟ್ಟಿ ಸಂಘಟನೆ, ಕಾರ್ಯಕರ್ತರಿದ್ದಾರೆ. ಸದಸ್ಯತ್ವಾ ಅಭಿಯಾನದಲ್ಲಿ ಜಿಲ್ಲೆ ಹಿಂದಿದೆ. ರಾಷ್ಟ್ರ, ರಾಜ್ಯ ನಾಯಕರ ಕನಸು ಈಡೇರಿಸಬೇಕಿದೆ. ಸದಸ್ಯತ್ವಾ ಅಭಿಯಾನ ಅರ್ಜಿಯಲ್ಲಿ ತಾಂತ್ರಿಕತೆಯಿರುವುದರಿಂದ ದೆಹಲಿಯಲ್ಲಿಯೇ ಕುಳಿತು ನಾಯಕರು ಜಿಲ್ಲೆಯಲ್ಲಿ ಆಗಿರುವ ಸದಸ್ಯತ್ವಾ ಅಭಿಯಾನದ ಕುರಿತು ಮಾಹಿತಿ ಪಡೆದುಕೊಳ್ಳಬಹುದಾಗಿದೆ.

    ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕರ್ತರು ಎಚ್ಚೆತ್ತು ಹೆಚ್ಚು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಅಧ್ಯಕ್ಷರಾಗಿ ಡಿ.ಸುಧಾಕರ್ ಅವಿರೋಧ ಆಯ್ಕೆ

    ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ತಮ್ಮೇಶ್‌ಗೌಡ, ಮುಖಂಡರಾದ ಜಿ.ಎಸ್.ಅನಿತ್‌ಕುಮಾರ್, ಶರಣ ತಳ್ಳಿಕೆರಿ, ಜಿ.ಟಿ.ಸುರೇಶ್, ಸಂಪತ್ಕುಮಾರ್, ಮಧುಗಿರಿ ಜಿಲ್ಲಾಧ್ಯಕ್ಷ ಹನುಮಂತೆಗೌಡ, ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಎಸ್.ಲಿಂಗಮೂರ್ತಿ, ಜಿ.ಎಂ.ಸುರೇಶ್, ಕುಮಾರಸ್ವಾಮಿ, ಮಲ್ಲಿಕಾರ್ಜುನ ಮತ್ತಿತರರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top