
CHITRADURGA NEWS | 23 October 2025
ಹೊಸದುರ್ಗ: ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ ಬೆಂಗಳೂರಿನ ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆ, ಹಿರಿಯ ಕಲಾವಿದೆ ಉಮಾಶ್ರೀ ಅವರನ್ನು ಆಯ್ಕೆ ಮಾಡಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ತಿಳಿಸಿದ್ದಾರೆ.
ಇದನ್ನೂ ಓದಿ: ವಿವಿ ಸಾಗರ ಭರ್ತಿ | ಶಾಸಕ ಬಿ.ಜಿ.ಗೋವಿಂದಪ್ಪ ಸುದ್ದಿಗೋಷ್ಠಿ | ಹಿನ್ನೀರು ರೈತರಿಗೆ ಸ್ಪಂಧನೆ
2004 ರಿಂದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಹೆಸರಿನಲ್ಲಿ `ಶ್ರೀ ಶಿವಕುಮಾರ ಪ್ರಶಸ್ತಿ’ಯನ್ನು ನಮ್ಮ ಕಲಾಸಂಘವು ಕೊಡುತ್ತಾ ಬಂದಿದೆ. ರಂಗಭೂಮಿ ಮತ್ತು ರಂಗಚಟುವಟಿಕೆಗಳಲ್ಲಿ ಮಹತ್ವದ ಸಾಧನೆ ಮಾಡಿದ ಸಾಧಕರಿಗೆ ಲಿಂಗಭೇದವಿಲ್ಲದೆ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.
ಇದುವರೆಗೂ ಪ್ರಸನ್ನ(2004), ಸಿಜಿಕೆ(2005), ಪಿ ಜಿ ಗಂಗಾಧರಸ್ವಾಮಿ(2006), ಅಶೋಕ ಬಾದರದಿನ್ನಿ(2007), ಮಾಲತಿಶ್ರೀ(2008), 2009ರಲ್ಲಿ ಅತಿವೃಷ್ಠಿ ಕಾರಣ ನೀಡಿಲ್ಲ. ಸಿ ಬಸವಲಿಂಗಯ್ಯ(2010), ಬಿ ಜಯಶ್ರೀ(2011), ಡಾ. ಕೆ ಮರುಳಸಿದ್ಧಪ್ಪ(2012), ಚಿದಂಬರರಾವ್ ಜಂಬೆ(2013), ಕೋಟಗಾನಹಳ್ಳಿ ರಾಮಯ್ಯ(2014), ಡಾ. ಸುಭದ್ರಮ್ಮ ಮನ್ಸೂರು (2015), ಲಕ್ಷ್ಮೀ ಚಂದ್ರಶೇಖರ್ (2016), ಶ್ರೀನಿವಾಸ ಜಿ ಕಪ್ಪಣ್ಣ (2017), ಬಸವರಾಜ ಬೆಂಗೇರಿ(2018), ಟಿ ಎಸ್ ನಾಗಾಭರಣ (2019), 2020ರಲ್ಲಿ ಕರೋನಾ ಕಾರಣದಿಂದ ನೀಡಿಲ್ಲ.
ಇದನ್ನೂ ಓದಿ: VANIVILASA SAGARA DAM: ವಿವಿ ಸಾಗರ ಕೋಡಿಯಲ್ಲಿ ಜಲ ವೈಭವ | ಮೈದುಂಬಿದ ವೇದಾವತಿ | ಮುಂದುವರೆದ ಮಳೆ
ಕೆ ವಿ ನಾಗರಾಜಮೂರ್ತಿ (2021), ಡಾ. ಎಂ ಜಿ ಈಶ್ವರಪ್ಪ(2022), ಶಶಿಧರ ಅಡಪ (2023), ಮಹಾಂತೇಶ್ ಗಜೇಂದ್ರ ಗಡ (2024) ಇವರಿಗೆ ನೀಡುತ್ತಾ ಬರಲಾಗಿದೆ. ಈ ವರ್ಷ ಈ ಪ್ರಶಸ್ತಿಗೆ ಭಾಜನರಾದವರು ರಂಗಭೂಮಿ ಮತ್ತು ಚಲನಚಿತ್ರರಂಗದ ಶ್ರೇಷ್ಠ ಕಲಾವಿದೆ ಉಮಾಶ್ರೀ ಅವರು.
ಆಯ್ಕೆ ಸಮಿತಿಯ ಮುಂದೆ ಹತ್ತಾರು ಪ್ರತಿಭಾವಂತ ಮತ್ತು ಅರ್ಹ ರಂಗಕರ್ಮಿಗಳ ಹೆಸರುಗಳಿದ್ದವು. ಪ್ರಶಸ್ತಿ ಒಂದೇ ಆಗಿರುವುದರಿಂದ ಅಂತಿಮವಾಗಿ ರಂಗಕ್ಷೇತ್ರ, ಚಲನಚಿತ್ರ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಈಗಲೂ ತೊಡಗಿಕೊಂಡಿರುವ ಶ್ರೀಮತಿ ಉಮಾಶ್ರೀ ಅವರನ್ನು ಆಯ್ಕೆ ಮಾಡಿದೆ.
ಇಂತಹ ಅಪರೂಪದ ರಂಗಕಲಾವಿದೆ `ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿರುವುದು ನಮಗೆ ತುಂಬಾ ಸಂತೋಷವಾಗಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಉಮಾಶ್ರೀ ಅವರನ್ನು ಅಭಿನಂದಿಸಿ ಸುದ್ದಿಯನ್ನು ಮಾಧ್ಯಮಗಳಿಗೆ ಬಿಡುಗೊಳಿಸಿದರು.
ಇದನ್ನೂ ಓದಿ: ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಹನುಮಂತರಾಯ ರೆಡ್ಡಿ ನಿಧನ
ಪ್ರಶಸ್ತಿಯು ೫೦ ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು ಇದೇ ನವೆಂಬರ್ ೨ ರಿಂದ ೭ ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಸಮಾರಂಭದ ದಿನ ಪ್ರದಾನ ಮಾಡಲಾಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

