
CHITRADURGA NEWS | 29 JANUARY 2026
ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕುಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಈಗಾಗಲೇ ಜನವರಿ 23 ರಿಂದ ಪ್ರಾರಂಭವಾಗಿದ್ದು, ಫೆ.25 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಮಾವಿನಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ | ಫೆಬ್ರವರಿ 22 ರಿಂದ 27ರವರೆಗೆ
ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.schooleducation.kar.nic.in ಮತ್ತು www.vidyavahini.karnataka.gov.in ವೆಬ್‍ಪುಟಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲ್ಲೂಕು, ಜಿಲ್ಲೆ, ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲ್ಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಛಿಸಲು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: 12ನೇ ಶತಮಾನದ ಶರಣೆಯರು ಇಂದಿನ ಮಹಿಳೆಯರಿಗೆ ಆದರ್ಶ | ನಿವೃತ್ತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಖಂಡಿಮಠ
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ (ಆಡಳಿತ)/ಅಭಿವೃದ್ಧಿ, ಬಿಇಒ/ಬಿಆರ್‍ಸಿ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು, ಮುಖ್ಯ ಶಿಕ್ಷಕರು, ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮುರು ತಾಲ್ಲೂಕು ಇವರನ್ನು ಸಂಪರ್ಕಿಸಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
