CHITRADURGA NEWS | 13 MARCH 2026
ಚಿತ್ರದುರ್ಗ: ಆದರ್ಶ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ದಾಖಲಾತಿ ಪಡೆಯಲು, ಪ್ರವೇಶ ಪರೀಕ್ಷೆ ಮಾ.22 ರಂದು ಚಳ್ಳಕೆರೆ ಮತ್ತು ಮೊಳಕಾಲ್ಮೂರು ಕೇಂದ್ರದಲ್ಲಿ ನಡೆಯಲಿದ್ದು ಅಧಿಕಾರಿಗಳು ಪರೀಕ್ಷಾ ಪಾವಿತ್ರ್ಯತೆ ಕಾಪಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

ಇದನ್ನೂ ಓದಿ: ಪಿಯುಡಿಡಿ ಇಲಾಖೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಉಪನ್ಯಾಸಕರು, ಪ್ರಾಚಾರ್ಯರ ವಿರೋಧ | ಮೌನ ಪ್ರತಿಭಟನೆ
ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆದರ್ಶ ವಿದ್ಯಾಲಯಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ದಾಖಲಾತಿ ಪಡೆಯಲು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಮಾ.22 ರಂದು ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರಗೆ ಪರೀಕ್ಷೆ ನಡೆಸಲಾಗುವುದು. ಚಳ್ಳಕೆರೆ ತಾಲ್ಲೂಕಿನಲ್ಲಿ 04 ಪರೀಕ್ಷಾ ಕೇಂದ್ರಗಳಲ್ಲಿ 988 ವಿದ್ಯಾರ್ಥಿಗಳು, ಮೊಳಕಾಲ್ಮೂರು 03 ಕೇಂದ್ರಗಳು 773 ವಿದಾರ್ಥಿಗಳು, ಸೇರಿ 1761 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಾಯಿಸಿಕೊಂಡಿದ್ದಾರೆ.
ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಿಕೊಡದಂತೆ ಪ್ರವೇಶ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಬೇಕು. ನಿಗದಿತ ವೇಳೆಯೊಳಗೆ ಮಾರ್ಗಾಧಿಕಾರಿಗಳು ಪ್ರಶ್ನೆ ಪತ್ರಿಕೆಯನ್ನು ತಲುಪಿಸಬೇಕು. ಪರೀಕ್ಷೆ ಬಳಿಕ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ನಿಗದಿತ ಸ್ಥಳಕ್ಕೆ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕಾಗಿ ತಲುಪಿಸುವ ಕಾರ್ಯವನ್ನು ಕೈಗೊಳ್ಳಬೇಕು.
ಇದನ್ನೂ ಓದಿ: ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ | ಜಮೀನು, ನಿವೇಶನ, ಮೂಲ ಸೌಲಭ್ಯಕ್ಕೆ ಒತ್ತಾಯ
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಬಿ.ಎನ್.ಎಸ್. ಸೆಕ್ಷನ್ 163ರ ಅನಸಾರ ನಿಷೇಧಾಜ್ಞೆ ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕೈಗೊಳ್ಳಬೇಕು.
ಪರೀಕ್ಷಾ ಕೇಂದ್ರದೊಳಗೆ ಯಾವುದೇ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದಂತೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು, ಹಾಗೂ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ತಪಾಸಣೆಯನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ನೀಡಿದರು.
ಇದನ್ನೂ ಓದಿ: ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ.ಎಂ.ಆರ್, ಸಭೆಯಲ್ಲಿ ಡಯಟ್ ಪ್ರಾಂಶುಪಾಲ ನಾಗಭೂಷಣ್ ಸೇರಿದಂತೆ ಬಿಇಓಗಳು ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
