ಮುಖ್ಯ ಸುದ್ದಿ
ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

CHITRADURGA NEWS | 20 JANUARY 2024
ಚಿತ್ರದುರ್ಗ: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ 6ನೇ ತರಗತಿಗೆ ದಾಖಲಾಗಲು ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಜನವರಿ 17 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಫೆಬ್ರವರಿ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ ಓದಿ: ಭೀಕರ ಅಪಘಾತದಲ್ಲಿ ಕೃಷಿ ಇಲಾಖೆ ಅಧಿಕಾರಿ ಮೃತ
ಪರೀಕ್ಷೆಗೆ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು www.schooleducation.kar.nic.in ಮತ್ತು www.vidyavahini.karnataka.gov.in ವೆಬ್ ಪುಟಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಅಲ್ಲದೆ ಈ 2 ತಾಲ್ಲೂಕುಗಳ ಖಾಯಂ ನಿವಾಸಿಗಳ ಮಕ್ಕಳು ಬೇರೆ ತಾಲೂಕು/ಜಿಲ್ಲೆ/ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ ಸಹ 6ನೇ ತರಗತಿಯಿಂದ ಮೂಲ ತಾಲೂಕಿನಲ್ಲಿ ವ್ಯಾಸಂಗ ಮಾಡಲು ಇಚ್ಚಿಸಿದಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಡಿಡಿಪಿಐ ಆಡಳಿತ/ಅಭಿವೃದ್ಧಿ, ಬಿ.ಇ.ಓ/ಬಿ.ಆರ್.ಸಿ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕು, ಮುಖ್ಯ ಶಿಕ್ಷಕರು, ಆದರ್ಶ ವಿದ್ಯಾಲಯ ಚಳ್ಳಕೆರೆ, ಮೊಳಕಾಲ್ಮೂರು ತಾಲೂಕು ಇವರನ್ನು ಸಂಪರ್ಕಿಸಬೇಕು ಎಂದು ಡಯಟ್ ಪ್ರಾಚಾರ್ಯ ನಾಸಿರುದ್ದೀನ್ ತಿಳಿಸಿದ್ದಾರೆ.
