CHITRADURGA NEWS | 24 JANUARY 2026
ಚಿತ್ರದುರ್ಗ: ಚುನಾವಣಾ ಪ್ರಕ್ರಿಯೆಯಲ್ಲಿನ ಅತ್ಯುತ್ತಮ ಕಾರ್ಯಕ್ಷಮತೆಗಾಗಿ ನೀಡಲಾಗುವ 2025-26ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಚುನಾವಣಾ ಅಭ್ಯಾಸ ಪ್ರಶಸ್ತಿ’ಗೆ ಜಿಲ್ಲೆಯ ಇಬ್ಬರು ಅಧಿಕಾರಿಗಳು ಭಾಜನರಾಗಿದ್ದಾರೆ.
ಇದನ್ನೂ ಓದಿ: ಅಡಿಕೆ ಧಾರಣೆ | 24 ಜನವರಿ | ತೀರ್ಥಹಳ್ಳಿ ಮಾರುಕಟ್ಟೆ ಅಡಿಕೆ ರೇಟ್
ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳ ವಿಭಾಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚುನಾವಣಾ ಆಯೋಗವು ಕೈಗೊಂಡಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಆಯೋಗ ವಹಿಸಿದ ವಿವಿಧ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದಕ್ಕಾಗಿ ಆಯೋಗವು ಈ ಪ್ರಶಸ್ತಿಗಾಗಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದೆ.
ಬಿಎಲ್‍ಒ ವಿಭಾಗದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಉಪ್ಪಾರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿ ಎನ್.ಅಂಬಿಕಾ ಅವರೂ ಈ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಉತ್ತಮ ನಿರ್ವಹಣೆಗಾಗಿ ಬಿಎಲ್‍ಒ ಆಗಿ ಕಾರ್ಯ ನಿರ್ವಹಿಸಿರುವ ಅಂಬಿಕಾ ಅವರು ಆಯೋಗದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭ | ಸಂಸದ ಗೋವಿಂದ ಕಾರಜೋಳ
ಇದೇ ಜನವರಿ 25ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್‍ನಲ್ಲಿ ಆಯೋಜಿಸಿರುವ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
