CHITRADURGA NEWS | 17 MARCH 2026
ಚಿತ್ರದುರ್ಗ: ಹೊಳಲ್ಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 06 ಅರ್ಜಿ ಸಲ್ಲಿಸಲು ಕೊನೆಯ ದಿನ.

ಇದನ್ನೂ ಓದಿ: ಜಿಲ್ಲೆಯಲ್ಲಿ ಗೃಹ ಬಳಕೆ LPG ಸಿಲಿಂಡರ್ ಕೊರತೆಯಿಲ್ಲ | ನಿಯಮಾನುಸಾರವೇ ಆನ್‍ಲೈನ್ ಬುಕ್ಕಿಂಗ್ ಮಾಡಿ | ಡಿಸಿ
ಹಿರಿಯೂರು ಹಾಗೂ ಹೊಳಲ್ಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯಗಳಲ್ಲಿ ಅಪರ ಸರ್ಕಾರಿ ವಕೀಲರ ನೇಮಕಾತಿ ಅವಧಿಯು ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ನೇಮಕಾತಿ ಮಾಡಲು ಉದ್ದೇಶಿಸಲಾಗಿದೆ.
ಆಸಕ್ತಿವುಳ್ಳ ಹಾಗೂ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರು ಏಪ್ರಿಲ್ 06ರ ಸಂಜೆ 5.30ರೊಳಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಚಿತ್ರದುರ್ಗ ಇಲ್ಲಿಗೆ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಲು ತಿಳಿಸಿದೆ.
ಇದನ್ನೂ ಓದಿ:
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
